ಸೆ.4ರಂದು ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ: ಬಾಕಿ ಇರುವ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ

ಕರ್ನಾಟಕ ರಾಜ್ಯ ಲೋಕಾಯುಕ್ತ ಸಂಸ್ಥೆಯಿಂದ ಜಿಲ್ಲೆಯ ಬಾಕಿ ಇರುವ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯನ್ನು ಸೆಪ್ಟೆಂಬರ್ 04 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಗುವುದು.

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲ್ಲಿದ್ದಾರೆ. ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಳಾದ ಡಾ.ಕೆ.ಎನ್ ಅನುರಾಧಾ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಕೆ. ಬಾಬಾ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಕೆ. ವಂಶಿಕೃಷ್ಣ , ಕರ್ನಾಟಕ ಲೋಕಾಯುಕ್ತ ವಿಚಾರಣೆಗಳು-1 ಉಪ ನಿಬಂಧಕರಾದ ಅರವಿಂದ ಎನ್‌.ವಿ, ಹಿರಿಯ ಶ್ರೇಣಿ ದಿವಾಣಿ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲ್ ಭೀಮಸೇನ ಬಗಾಡಿ ಅವರು ಉಪಸ್ಥಿತರಿರುವರು.

Ramesh Babu

Journalist

Recent Posts

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

1 hour ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ…

1 hour ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

5 hours ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

8 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

10 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

13 hours ago