ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ DF6–ಟೆಲಿಫೋನ್ ಎಕ್ಸ್‌ಚೇಂಜ್ ಹಾಗೂ DF7–ಲೋಕಲ್-1 ಫೀಡರ್‌ಗಳಲ್ಲಿ ವಿದ್ಯುತ್ ಕಾಮಗಾರಿ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳಲ್ಲಿ ಸೋಮೇಶ್ವರ ಬಡಾವಣೆ, ರೋಜೀಪುರ, ವಿನಾಯಕನಗರ, ಗಂಗಾಧರಪುರ, ಬಸವೇಶ್ವರನಗರ, ದೊಡ್ಡಮ್ಮ ದೇವಸ್ಥಾನ, ಶಾಂತಿನಗರ, ಇಸ್ಲಾಂಪುರ, ತ್ಯಾಗರಾಜನಗರ, ಕಲ್ಲುಪೇಟೆ, ಕರೇನಹಳ್ಳಿ, ದೇವರಾಜನಗರ, ಕೊಂಗಾಡಿಯಪ್ಪ ಮುಖ್ಯರಸ್ತೆ, ಕನಕದಾಸ ರಸ್ತೆ, ಬಸವಣ್ಣ ದೇವಸ್ಥಾನ ರಸ್ತೆ, ವೀರಾಪುರ, ಖಾಸಾಬಾಗ್, ರಂಗಪ್ಪ ಸರ್ಕಲ್, ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು ಸೇರಿವೆ.
ಕಾಮಗಾರಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…