ಸೆ.7ರಂದು (ಭಾನುವಾರ) ಚಂದ್ರಗ್ರಹಣ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಸಂಜೆ 4:30 ಗಂಟೆಗೆ ಬಂದ್

ಸೆಪ್ಟಂಬರ್ 7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಗೋಚರಿಸಲಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವನ್ನ ಸಂಜೆ 4:30 ಗಂಟೆಗೆ ಬಂದ್‌ ಮಾಡಲಾಗುತ್ತಿದೆ.

ಪ್ರತಿ ದಿನವೂ ರಾತ್ರಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಗ್ರಹಣದ ಅಂಗವಾಗಿ ಸಂಜೆ 4:30ಕ್ಕೆ ಮುಚ್ಚಲಾಗುತ್ತದೆ. ಇನ್ನೂ ಗ್ರಹಣದ ನಂತರ ಎಂದಿನಂತೆ ಮರುದಿನ ಬೆಳಿಗ್ಗೆ ಶುದ್ಧೀಕರಣ ಮಾಡಿ ಬಳಿಕ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಹೀಗಾಗಿ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಭಾರತದಾದ್ಯಂತ ಗೋಚರಿಸಲಿದೆ. ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದೆ.

ಸೆ.7ರ ರಾತ್ರಿ 9:57ರ ರಾತ್ರಿ ಸ್ಪರ್ಶಕಾಲ ಹಾಗೂ ಸೆ.8ರ ಮಧ್ಯರಾತ್ರಿ 1:26ಕ್ಕೆ ಮೋಕ್ಷಕಾಲ ಸಂಭವಿಸಲಿದೆ. ಚಂದ್ರಗ್ರಹಣದ ಪೂರ್ಣ ಪ್ರಭಾವದ ಆರಂಭವು ಮಧ್ಯರಾತ್ರಿ 12:28 ರಿಂದ 1:56ರ ವರೆಗೆ ಇರಲಿದೆ. ಸುದೀರ್ಘ ಅವಧಿ ಅಂದರೆ ಮೂರು ಗಂಟೆಗಳ ಕಾಲ ಸಂಭವಿಸಲಿದೆ. ಭಾರತದಲ್ಲಿ ಎಲ್ಲೆಡೆ ಗ್ರಹಣ ಗೋಚರವಾಗಲಿದೆ. ರಕ್ತವರ್ಣದಲ್ಲಿ ಚಂದಿರ ಗೋಚರಿಸಲಿದ್ದಾನೆ.

ಇದು ಪೂರ್ಣ ಚಂದ್ರಗ್ರಹಣ. ಇಡೀ ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸುತ್ತದೆ. ಇದೊಂದು ಅಪರೂಪದ ವಿದ್ಯಮಾನ. ಖಗೋಳ ವಿಸ್ಮಯ ಎಂದು ನೆಹರೂ ತಾರಾಲಯದ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!