ಸೇಂಟ್ ವ್ಯಾಲೆಂಟೈನ್ ಕ್ರೀಡಾ ಮಹಿಳಾ ಕ್ವಾಡ್ರಾಂಗ್ಯುಲರ್–2026 ಟೂರ್ನಮೆಂಟ್: ಪ್ಲೇಯರ್ ಆಫ್ ದಿ ಮ್ಯಾಚ್ ಹಾಗೂ ಬೆಸ್ಟ್ ಬೌಲರ್ ಪ್ರಶಸ್ತಿ ಪಡೆದ ದೊಡ್ಡಬಳ್ಳಾಪುರದ ಕುವರಿ

ಸೇಂಟ್ ವ್ಯಾಲೆಂಟೈನ್ ಕ್ರೀಡಾ ಮಹಿಳಾ ಕ್ವಾಡ್ರಾಂಗ್ಯುಲರ್–2026 ಟೂರ್ನಮೆಂಟ್ ನಲ್ಲಿ ದೊಡ್ಡಬಳ್ಳಾಪುರ ಮೂಲದ ಚಿಂತನಾ ಎಚ್ ಆರ್ ಅವರ ಅದ್ವಿತೀಯ ಆಟದಿಂದ ಒಂದು ಪಂದ್ಯದಲ್ಲಿ 5 ವಿಕೆಟ್ ಪಡೆದಿದ್ದಾರೆ. ಟೂರ್ನಮೆಂಟ್‌ನಲ್ಲಿ ಒಟ್ಟು 7 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರಿಗೆ ಪ್ಲೇಯರ್ ಆಫ್ ದ ಮ್ಯಾಚ್ ಹಾಗೂ ಬೆಸ್ಟ್ ಬೌಲರ್ ಪ್ರಶಸ್ತಿಗಳು ಲಭಿಸಿವೆ. ಫೈನಲ್ ಪಂದ್ಯದಲ್ಲಿ 17 ರನ್‌ಗಳನ್ನು ಸಹ ಗಳಿಸಿದ್ದಾರೆ.

ಚಿಂತನಾ ಎಚ್ ಆರ್ ಅಕ್ಷರ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರು ನೈಸ್ ಅಕಾಡೆಮಿಯಲ್ಲಿ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದಾರೆ. 2025ರಲ್ಲಿ ಸ್ಟೇಟ್ ಝೋನಲ್ಸ್ ಹಾಗೂ ಪ್ರಾಬಬಲ್ಸ್‌ಗೆ ಆಯ್ಕೆಯಾಗಿದ್ದಾರೆ.

ನೈಸ್ ಅಕಾಡೆಮಿಯ ಕೋಚ್‌ಗಳು ಹಾಗೂ ಅಕ್ಷರ ಪಬ್ಲಿಕ್ ಸ್ಕೂಲ್ ಟ್ರಸ್ಟ್ ಸದಸ್ಯರು, ಪ್ರಿನ್ಸಿಪಲ್ ಮತ್ತು ಶಿಕ್ಷಕರು ಚಿಂತನಾ ಎಚ್ ಆರ್ ಅವರನ್ನು ಅಭಿನಂದಿಸಿದ್ದಾರೆ.

ಆಟಗಾರರು: ಅಬಿಷ್ಪ್ರಜನಾ, ಶ್ರೀಗೌರಿ, ಚೈತನ್ಯ ಜೋಧಾ, ಚಿಂತನಾ HR, ಲಹರಿಕಾ ನಾಡಿಗ್, ಭೂಮಿಕಾ, ವೈಷ್ಣವಿ ಆಚಾರ್ಯ, ಪ್ರಾಚಿ ಚೌಧರಿ, ರಾಧಿಕಾ, ಹರುಷಾ ರೆಡ್ಡಿ, ಆಯತಿ ಸದೋತ್ರಾ, ಕಾನ್ಶಿಕಾ

Ramesh Babu

Journalist

Recent Posts

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

1 hour ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

2 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

7 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

8 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

21 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

21 hours ago