Categories: Accident

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಏರ್ಪೋರ್ಟ್ ರಸ್ತೆಯ ಭುವನಹಳ್ಳಿ ಗೇಟ್ ಸಮೀಪ ನಡೆದಿದೆ.

ಬೆಂಗಳೂರು ಪಿಣ್ಯ ಮೂಲದ ಚಂದನಾ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಚಂದನ ಅವರು ಜೂಪಿಟರ್ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ದೇವನಹಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಜೂಪಿಟರ್ ಬೈಕ್, ಭುವನಹಳ್ಳಿ ಬ್ರಿಡ್ಜ್ ಇಳಿಜಾರು ಪ್ರದೇಶದಲ್ಲಿ ಮುಂದೆ ಸಾಗುತ್ತಿದ್ದ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗ್ರಿಲ್‌ಗೆ ಅಪ್ಪಳಿಸಿದೆ.

ಘಟನೆಯ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಚಂದನಾ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಸೈಕಲ್ ಸವಾರ ಹಾಗೂ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

21 minutes ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

10 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

23 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago