ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು

ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ ಘಟನೆ ನಗರದ ಹಳೇ ಬಸ್ ನಿಲ್ದಾಣ ಸಮೀಪದ ಚೌಕದ ರಸ್ತೆಯಲ್ಲಿ ನಡೆದಿದೆ.

ತಳ ಮಹಡಿಯಲ್ಲಿ ಸೈಕಲ್ ಗೋಡೌನ್ ಇದ್ದು, ಅದರ ಮೇಲಿನ ಮಹಡಿಯಲ್ಲಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ. ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೇಲ್ಮಹಡಿಯಲ್ಲಿದ್ದ ಬ್ಯಾಂಕ್ ಸಿಬ್ಬಂದಿ ಆತಂಕಕ್ಕೊಳಗಾದರು. ಬೆಂಕಿ ಮೇಲ್ಮಹಡಿಗೂ ವ್ಯಾಪಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ನಾಲ್ಕು ನೀರಿನ ಟ್ಯಾಂಕ್‌ಗಳ ನೀರು ಖಾಲಿಯಾದರೂ ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ ಎನ್ನಲಾಗಿದೆ. ಇದರಿಂದ ಗೋಡೌನ್ ಸುತ್ತಮುತ್ತಲಿನ ಅಂಗಡಿಗಳು ಹಾಗೂ ಮನೆಗಳಿಗೂ ಬೆಂಕಿ ಹಬ್ಬುವ ಆತಂಕ ಎದುರಾಗಿದೆ.

ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಗರ ಠಾಣೆ ಇನ್ಸ್‌ಪೆಕ್ಟರ್ ಮುತ್ತುರಾಜ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೆಚ್ಚಿನ ಅನಾಹುತ ಸಂಭವಿಸದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಘಟನೆಯಿಂದ ಗೋಡೌನ್‌ನಲ್ಲಿದ್ದ ಸೈಕಲ್‌ಗಳಿಗೆ ಭಾರೀ ಹಾನಿಯಾಗಿದ್ದು, ಒಟ್ಟಾರೆ ನಷ್ಟದ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

2 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

5 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

17 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

23 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

23 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago