ಮೇ.10ರಂದು ನಡೆಯಲಿರುವ 2023ರ ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಸ್ವಯಂಪ್ರೇರಿತವಾಗಿ ಯುವಕರು ಸೈಕಲ್ ಜಾಥಾ ಹಮ್ಮಿಕೊಂಡಿದ್ದರು.
ನಗರದ ತಾಲ್ಲೂಕು ಕಚೇರಿ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ ಗಣಪತಿ ದೇವಾಲಯ, ಚೌಕದ ಸರ್ಕಲ್, ಸೌಂದರ್ಯ ಮಹಲ್ ಚಿತ್ರ ಮಂದಿರ, ಹಳೆ ಸರ್ಕಾರಿ ಆಸ್ಪತ್ರೆ ವೃತ್ತ, ಲಕ್ಷ್ಮೀ ಚಿತ್ರಮಂದಿರ, ತೇರಿನ ಬೀದಿ, ಕೆಸಿಪಿ ಕಲ್ಯಾಣ ಮಂಟಪ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಸೇರಿದಂತೆ ಹಲವು ಮಾರ್ಗಗಳಲ್ಲಿ ‘ಮತದಾನ ತಪ್ಪದೇ ಮಾಡಿ’ ಎಂಬ ಜಾಗೃತಿ ಫಲಕಗಳನ್ನು ಹೊತ್ತು ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥ ನಡೆಸಿದರು.
ಈ ವೇಳೆ ಮಾತನಾಡಿದ ಸೈಕಲ್ ಜಾಥಾ ತಂಡದ ಕಾರ್ತಿಕ್, ನಮ್ಮ ತಂಡ ಯಾವುದೇ ರಾಜಕೀಯ ವ್ಯಕ್ತಿ ಪರವಾಗಿಯಾಗಲಿ , ಪಕ್ಷದ ಪರವಾಗಿಯಾಗಲಿ ಪ್ರಚಾರ ಮಾಡುತ್ತಿಲ್ಲ. ಬದಲಿಗೆ 2023ರ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಇನ್ನು ಎರಡೇ ದಿನ ಬಾಕಿ ಇದ್ದೂ ತಾಲ್ಲೂಕಿನ ಅಭಿವೃದ್ದಿ ಮಾಡಲು ಯಾರು ಯೋಗ್ಯರೋ ಅಂಥವರನ್ನು ಗಮನದಲ್ಲಿರಿಸಿಕೊಂಡು ಮತದಾನ ಮಾಡುವಂತೆ ಮನವಿ ಮಾಡಿದರು.
ಶ್ರೀಕಾಂತ್ ಜನಾರ್ಧನ್ ಮಾತನಾಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕಿನ ಎಲ್ಲಾ ಜನತೆ ತಪ್ಪದೇ ಮತ ಹಾಕಿ, ರಾಜಕಾರಣಿಗಳ ಆಮಿಷಕ್ಕೆ ಒಳಗಾಗಬೇಡಿ, ನಿಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ, ತಾಲ್ಲೂಕಿನ ಅಭಿವೃದ್ದಿಯ ದೃಷ್ಟಿಯಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸಲುವಾಗಿ ಮತದಾನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು.
ಈ ವೇಳೆ ಅಭಿಷೇಕ್, ವಿಜಯ್ ಸಾಗರ್, ಗಿರೀಶ್, ಶಶಾಂಕ್ ಇದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…