ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೈಕಲ್ ಜಾಥಾ ಮೂಲಕ ವಿನೂತನವಾಗಿ ಸಾರ್ವಜನಿಕರಿಗೆ ಸಂವಿಧಾನ ಜಾಗೃತಿ ಮೂಡಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೆಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಇಂದು ನಡೆದ ಸಂವಿಧಾನ ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಾತನಾಡಿ, ಭಾರತ ಸಂವಿಧಾನ ಅಂಗೀಕಾರವಾಗಿ 75 ವರ್ಷ ಪೂರೈಸಿದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾವನ್ನು ಪ್ರತಿಯೊಂದು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದದ್ದು, ಪ್ರತಿಯೊಂದು ಕಾಯ್ದೆಯ ಮೂಲ ಸಂವಿಧಾನ. ಸಂವಿಧಾನ ಅಡಿಯಲ್ಲಿ ದೇಶದ ಕಾನೂನು ನಡೆಯುತ್ತಿದೆ. ಯಾವುದನ್ನ ಮಾತನಾಡಬೇಕು ಯಾವುದನ್ನ ಮಾತನಾಡಬಾರದು ಎಂದು ವಾಕ್ ಸ್ವಾತಂತ್ರ್ಯ ಹೇಳುತ್ತದೆ. ಪ್ರತಿಯೊಬ್ಬ ಪ್ರಜೆಗೂ ಅಂತಹ ವಾಕ್ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಸಮಾನತೆ, ಸ್ವಾತಂತ್ರ್ಯ ಕಲ್ಪಿಸುವ ಸಂವಿಧಾನ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ಸಂವಿಧಾನ ಜಾಗೃತಿ ಜಾಥಾ ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳಲ್ಲಿ ಯಶಸ್ವಿಯಾಗಿ ನಡೆದಿದ್ದು, ದೊಡ್ಡಬಳ್ಳಾಪುರದಲ್ಲಿ ಯಶಸ್ವಿಯಾಗಿ ಜಾಥಾ ನಡೆಯುತ್ತಿದೆ, ಜಾಥಾ ಹೋಗುವ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸಾರ್ವಜನಿಕರಿಗೆ ಸಂವಿಧಾನ ಪೀಠಿಕೆ ಬೋಧಿಸಿ, ಸಂವಿಧಾನ ಮಹತ್ವ ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿ, ಸಂವಿಧಾನ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮಹಿಳೆಯರು ಕಳಶ ಹೊರುವ ಮೂಲಕ ಬರಮಾಡಿಕೊಂಡರು, ಸೈಕಲ್ ಜಾಥಾ, ಎತ್ತಿನ ಗಾಡಿ ಜಾಥಾ, ಬೈಕ್ ರ್ಯಾಲಿಯೊಂದಿಗೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ದೊಡ್ಡಬಳ್ಳಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉಮಾಪತಿ, ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಆಶಾರಾಣಿ, ಉಪಾಧ್ಯಕ್ಷರಾದ ಸೌಭಾಗ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಮ್ಯ, ನೋಡೆಲ್ ಅಧಿಕಾರಿ ರಾಜೇಶ್ವರಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಯಾ ಗ್ರಾಮಪಂಚಾಯಿತಿ ವ್ಯಾಪ್ತಿಯ ಸದಸ್ಯರು, ಮುಖಂಡರು, ವಿವಿಧ ಸಂಘಟನೆಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…