ಸೈಟ್ ವಿವಾದದಲ್ಲಿ ಮಹಿಳೆ ಹತ್ಯೆ ಪ್ರಕರಣ: ಕೊಲೆಗಾರನಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದ ಕೋರ್ಟ್
ಸೈಟ್ ವಿವಾದದಲ್ಲಿ ಮಹಿಳೆಯನ್ನು ಹತ್ಯೆ ಮಾಡಿದ್ದ ಆರೋಪಕ್ಕೆ ಗುರಿಯಾಗಿದ್ದ ವ್ಯಕ್ತಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂಗಳ ದಂಡವನ್ನು ವಿಧಿಸಿ ತೀರ್ಪನ್ನು ನೀಡಿ ಕೋರ್ಟ್ ಆದೇಶ ನೀಡಿದೆ.
2018 ಆಗಸ್ಟ್ 18 ರಂದು ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ನಿವಾಸಿ ದಿನೇಶ್ ಎಂಬಾತ ಸೈಟ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಪುಟ್ಟಮ್ಮ ಎನ್ನುವವರನ್ನು ಹತ್ಯೆ ಮಾಡಿದ್ದರು ಎಂದು ಹೊಸಹಳ್ಳಿಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಆರೋಪಿ ದಿನೇಶನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ವಾದ ಪ್ರತಿವಾದ ಆಲಿಸಿದ ದೊಡ್ಡಬಳ್ಳಾಪುರದ 4 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ಅವರು ಆರೋಪಿ ದಿನೇಶ್‌ಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ಗಳ ದಂಡವನ್ನು ವಿಧಿಸಿ ತೀರ್ಪನ್ನು ನೀಡಿದ್ದಾರೆ.
ಅಲ್ಲದೆ ಇದೇ ಪ್ರಕರಣದಲ್ಲಿ ಮತ್ತೊಂದು ಸೆಕ್ಷನ್ 1860ರ ಕಲಂ 324ರ ಅಪರಾಧಿ ದಿನೇಶ್ ಎರಡು ವರ್ಷ ಎರಡು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡವನ್ನು ಸಹ ವಿಧಿಸಲಾಗಿದೆ.
ಸರ್ಕಾರದ ಪರ ನ್ಯಾಯವಾದಿ ನಟರಾಜ್ ವಾದ ಮಂಡಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಡಿವೈಎಸ್ಪಿ ರವಿ.ಪಿ ಸೂಚನೆ ಅಡಿಯಲ್ಲಿ ಆಗಿನ ಇನ್ಸೆಕ್ಟರ್ ಸಿದ್ದರಾಜು, ಈಗಿನ ಇನ್ಸೆಕ್ಟರ್ ರಾವ್ ಗಣೇಶ್ ಜನಾರ್ಧನ್ ತನಿಖೆಯ ನೇತೃತ್ವ ವಹಿಸಿದ್ದರು.
ಕೋರ್ಟ್ ಮಾನಿಟರಿಂಗ್ ಸೆಲ್ ನ ಎಎಸ್‌ಐ ಸಿದ್ದಲಿಂಗಯ್ಯ, ನರಸಿಂಹ ಮೂರ್ತಿ, ಹರೀಶ್ ದಾಖಲೆಗಳನ್ನು ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…
ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…
2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಸಾಸಲು ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಏ.19ರ ಭಾನುವಾರದಂದು ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್…
ಶೌರ್ಯ, ಕ್ರೌರ್ಯ, ಆದರ್ಶ ಮತ್ತು ಎಚ್ಚರಿಕೆ....... ಇಸ್ರೇಲ್ ದೇಶದ ದ್ವೇಷದ ಬೆಂಕಿ ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ..... ಇಸ್ರೇಲ್…