ಸೈಟ್ ವಿವಾದದಲ್ಲಿ ಮಹಿಳೆ ಹತ್ಯೆ ಪ್ರಕರಣ: ಕೊಲೆಗಾರನಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ಸೈಟ್ ವಿವಾದದಲ್ಲಿ ಮಹಿಳೆ ಹತ್ಯೆ ಪ್ರಕರಣ: ಕೊಲೆಗಾರನಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.  ದಂಡ ವಿಧಿಸಿದ ಕೋರ್ಟ್

ಸೈಟ್ ವಿವಾದದಲ್ಲಿ ಮಹಿಳೆಯನ್ನು ಹತ್ಯೆ ಮಾಡಿದ್ದ ಆರೋಪಕ್ಕೆ ಗುರಿಯಾಗಿದ್ದ ವ್ಯಕ್ತಿಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂಗಳ ದಂಡವನ್ನು ವಿಧಿಸಿ ತೀರ್ಪನ್ನು ನೀಡಿ ಕೋರ್ಟ್ ಆದೇಶ ನೀಡಿದೆ.

2018 ಆಗಸ್ಟ್ 18 ರಂದು ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ನಿವಾಸಿ ದಿನೇಶ್ ಎಂಬಾತ ಸೈಟ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಪುಟ್ಟಮ್ಮ ಎನ್ನುವವರನ್ನು ಹತ್ಯೆ ಮಾಡಿದ್ದರು ಎಂದು ಹೊಸಹಳ್ಳಿಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಆರೋಪಿ ದಿನೇಶನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ವಾದ ಪ್ರತಿವಾದ ಆಲಿಸಿದ ದೊಡ್ಡಬಳ್ಳಾಪುರದ 4 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ಅವರು ಆರೋಪಿ ದಿನೇಶ್‌ಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ಗಳ ದಂಡವನ್ನು ವಿಧಿಸಿ ತೀರ್ಪನ್ನು ನೀಡಿದ್ದಾರೆ.

ಅಲ್ಲದೆ ಇದೇ ಪ್ರಕರಣದಲ್ಲಿ ಮತ್ತೊಂದು ಸೆಕ್ಷನ್ 1860ರ ಕಲಂ 324ರ ಅಪರಾಧಿ ದಿನೇಶ್ ಎರಡು ವರ್ಷ ಎರಡು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡವನ್ನು ಸಹ ವಿಧಿಸಲಾಗಿದೆ.

ಸರ್ಕಾರದ ಪರ ನ್ಯಾಯವಾದಿ ನಟರಾಜ್ ವಾದ ಮಂಡಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಡಿವೈಎಸ್ಪಿ ರವಿ.ಪಿ ಸೂಚನೆ ಅಡಿಯಲ್ಲಿ ಆಗಿನ ಇನ್ಸೆಕ್ಟ‌ರ್ ಸಿದ್ದರಾಜು, ಈಗಿನ ಇನ್ಸೆಕ್ಟ‌ರ್ ರಾವ್ ಗಣೇಶ್ ಜನಾರ್ಧನ್ ತನಿಖೆಯ ನೇತೃತ್ವ ವಹಿಸಿದ್ದರು.

ಕೋರ್ಟ್ ಮಾನಿಟರಿಂಗ್ ಸೆಲ್ ನ ಎಎಸ್‌ಐ ಸಿದ್ದಲಿಂಗಯ್ಯ, ನರಸಿಂಹ ಮೂರ್ತಿ, ಹರೀಶ್ ದಾಖಲೆಗಳನ್ನು ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

4 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

14 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago