ಜಿಲ್ಲಾ ಸೈನಿಕ ಮಂಡಳಿಯ ಮೂರು ವರ್ಷಗಳ ಅವಧಿಯು ಮುಗಿದಿದ್ದು, ಮುಂದಿನ ಮೂರು ವರ್ಷ(2023-2026) ಗಳಿಗೆ ಸದರಿ ಮಂಡಳಿಯನ್ನು ರಚಿಸಬೇಕಾಗಿರುತ್ತದೆ. ಬೆಂಗಳೂರು (ಗ್ರಾಮಾಂತರ) ಜಿಲ್ಲಾ ಸೈನಿಕ ಮಂಡಳಿಗೆ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಬೆಂಗಳೂರು (ಗ್ರಾಮಾಂತರ) ಜಿಲ್ಲೆಗಳಿಂದ ಮಾಜಿ ಸೈನಿಕರ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಂತೆಯೇ ಈ ಮೇಲಿನ ಜಿಲ್ಲೆಗಳಲ್ಲಿ ನೆಲೆಸಿರುವ ಮಾಜಿ ಸೈನಿಕರು ಜಿಲ್ಲಾ ಮಂಡಳಿಯ ಅಧಿಕಾರೇತರ ಸದಸ್ಯರಾಗಲು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಆಸಕ್ತಿಯುಳ್ಳ ಮಾಜಿ ಸೈನಿಕರು, ಮಾಜಿ ಸೈನಿಕರ ಪತ್ನಿಯರು ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತಹ ಗಣ್ಯ ವ್ಯಕ್ತಿಗಳು ತಮ್ಮ ಸ್ವವಿವರ ಮತ್ತು ಇಚ್ಚಾ ಪತ್ರವನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು (ಗ್ರಾಮಾಂತರ), ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಭವನ, ನಂ, 58 ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು – 560025 ಇಲ್ಲಿಗೆ 31 ಆಗಸ್ಟ್ 2023 ರ ಒಳಗೆ ಕಳುಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ (080-15588718) ನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.