ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.
ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…