ಸೈಬರ್, ಆರ್ಥಿಕ ಅಪರಾಧಗಳು ವ್ಯಾಪಕವಾಗಿವೆ- ಸಿಎಂ ಸಿದ್ದರಾಮಯ್ಯ ಕಳವಳ

ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆಇಬಿ ಇಂಜಿನಿಯರ್ ಅಸೋಸಿಯೇಷನ್‌ನ ರಜತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಹಾಗೂ 17ನೇ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಭಿಯೋಜಕರು, ನ್ಯಾಯ ಸಂರಕ್ಷಕರು, ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದರು.

ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದು ಹೇಳಿದರು.

ಎನ್.ಸಿ.ಆರ್.ಬಿ ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ ಮತ್ತು ರಾಜಸ್ಥಾನ 22ನೇ ಸ್ಥಾನದಲ್ಲಿವೆ. ಇಲ್ಲಿ ಶಿಕ್ಷೆ ಪ್ರಮಾಣ 52%. ಕೇರಳದಲ್ಲಿ 87% ರಷ್ಟಿದೆ, ಮಿಜೋರಾಂ 92%, ಗುಜರಾತ್ ಮತ್ತು ತೆಲಂಗಾಣ 57%, ಉತ್ತರ ಪ್ರದೇಶದಲ್ಲಿ 72%, ದೆಹಲಿ 89% ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು, ಆಗ ಬದಲಾವಣೆ ಸಾಧ್ಯ ಎಂದು ತಿಳಿಸಿದರು.

ಸಮಸ್ಯೆಗಳ ಹೊರತಾಗಿಯೂ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು, ಆರ್ಥಿಕ ಅಪರಾಧಗಳು ವ್ಯಾಪಕವಾಗಿವೆ, ಇದನ್ನು ಮಟ್ಟಹಾಕಲು ತರಬೇತಿ ಕೂಡ ಅತ್ಯಂತ ಅವಶ್ಯಕ. ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದರು.

ಪ್ರತಿ ವರ್ಷವೂ ಸಮ್ಮೇಳನಗಳ ಜರುಗಬೇಕು. ಅಭಿಯೋಜಕರ ಅಕಾಡೆಮಿ ಸ್ಥಾಪಿಸಿ ಅನುದಾನವನ್ನೂ ನೀಡಲು ಕ್ರಮ ವಹಿಸುತ್ತೇವೆ, ಜೊತೆಗೆ ಬೇಡಿಕೆಗಳನ್ನು ಸಹ ಪರಿಶೀಲಿಸಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

43 minutes ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

3 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

9 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

19 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

19 hours ago