ಸೈಬರ್ ಹೂಡಿಕೆ ವಂಚನೆ ಪ್ರಕರಣ: ರಾಜಸ್ಥಾನದ 4 ಜನರನ್ನ ಬಂಧನ

ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯು ಸೈಬರ್ ಹೂಡಿಕೆ ವಂಚನೆ ಪ್ರಕರಣದಲ್ಲಿ ರಾಜಸ್ಥಾನದ 4 ಜನರನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಮಾಹಿತಿ ನೀಡಿದರು.

ಈ ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಮೋಸಗೊಳಿಸಿ, ಲಾಭದ ಹಂಚಿಕೆಯ ಭರವಸೆ ನೀಡಿ ಬ್ಯಾಂಕ್ ಖಾತೆಗಳನ್ನು ತೆರೆಯುವಂತೆ ಒತ್ತಾಯಿಸಿ, ನಂತರ ಈ ಖಾತೆಗಳು ವಿದೇಶಿ ವಿನಿಮಯಕ್ಕಾಗಿ ಅಗತ್ಯವಿದೆ ಎಂದು ಹೇಳಿದ್ದರು. ತನಿಖೆಯಲ್ಲಿ ಈ ಖಾತೆಗಳನ್ನು ವಂಚನೆಯ ಚಟುವಟಿಕೆಗಳಿಗಾಗಿ ದುರುಪಯೋಗಪಡಿಸಿರುವುದು ಬಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಇತರ ಶಂಕಿತರ ಪತ್ತೆ ಕಾರ್ಯ ಮುಂದುವರೆದಿದೆ ಎಂದರು.

ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಮೊಬೈಲ್ ಫೋನ್‌ಗಳನ್ನು ಕದ್ದು ಇತರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು ₹10,50,000 ಮೌಲ್ಯದ ವಿವಿಧ ಕಂಪನಿಯ 52 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಪರಾರಿಯಾಗಿರುವ ಇತರ ಆರೋಪಿಗಳ ಶೋಧನಾ ಕಾರ್ಯ ಮುಂದುವರೆದಿವೆ ಎಂದು ಮಾಹಿತಿ ನೀಡಿದರು.

ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನವನ್ನು ನಿಗ್ರಹಿಸಲು ನಡೆಸಿದ ಇತ್ತೀಚಿನ ಕಾರ್ಯಾಚರಣೆಯಲ್ಲಿ, ವಿವಿಧ ಪೊಲೀಸ್ ಠಾಣೆಗಳು ಒಟ್ಟು 62 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಈ ಕಳ್ಳತನಗಳಿಗೆ ಸಂಬಂಧಿಸಿದಂತೆ 12 ಜನರನ್ನು ಬಂಧಿಸಲಾಗಿದೆ. ಈ ಮುಖೇನ, ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 37 ಪ್ರಕರಣಗಳನ್ನು ಬಯಲಿಗೆಳೆಯಲು ಸಹಾಯ ಮಾಡಿವೆ ಎಂದು ತಿಳಿಸಿದರು.

Ramesh Babu

Journalist

Recent Posts

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

26 minutes ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

34 minutes ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

43 minutes ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

3 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

3 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

18 hours ago