Categories: ಕೋಲಾರ

ಸೊಸೈಟಿಯಿಂದ ರೈತರಿಗೆ ಸಾಲದ ರೂಪದಲ್ಲಿಯೇ ಲಾಭದಾಯಕ ಸಸಿಗಳನ್ನು ನೀಡಲು ಡಿಸಿಪಿ ದೇವರಾಜ್ ಸಲಹೆ

ಕೋಲಾರ: ರೈತರು ಅಭಿವೃದ್ಧಿಯಾಗಲು ಲಾಭದಾಯಕ ಸಸಿಗಳನ್ನು ಸೊಸೈಟಿ ಮೂಲಕವೇ ಸಾಲದ ರೂಪದಲ್ಲಿ ನೀಡುವ ಮೂಲಕ ಹೊಸ ಬದಲಾವಣೆಗೆ ಮುಂದಾಗಬೇಕು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಸಲಹೆ ನೀಡಿದರು,

ಭಾನುವಾರ ತಾಲೂಕಿನ ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ವಾಟನೆ ಹಾಗೂ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಸಹಕಾರಿ ಸಂಘಗಳು ಎಂದರೆ ಕೇವಲ ಸಾಲ ಕೊಡುವುದು ಸಾಲವನ್ನು ಕಟ್ಟಿಸಿಕೊಳ್ಳುವುದಕ್ಕೆ ಅಷ್ಟೇ ಸೀಮಿತಗೊಳಿಸದೇ ರೈತರಿಗೆ ಉಪಯುಕ್ತ ಮಾಹಿತಿ ನೀಡಬೇಕು ರೈತರು ಪ್ರತಿ ಬಾರಿ ಟಮೋಟ, ಆಲೂಗಡ್ಡೆ ಯಂತಹ ತರಕಾರಿ ಬೆಳೆಗಳಿಂದ ಸಾಲದ ಸುಳಿಯಲ್ಲಿ ಸಿಕ್ಕಿ ಜೀವನ ನಿರ್ವಹಣೆ ಕಷ್ಟವಾಗುತ್ತದೆ ಹೊಸ ಹೊಸ ಬಗೆಯ ಹಣ್ಣಿನ ಗಿಡಗಳನ್ನು ಸೊಸೈಟಿ ಮೂಲಕವೇ ಲಾಭ ಪಡೆಯುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕು ಎಂದರು.

ಯಾರಿಗೆ ಆಗಲಿ ಅಧಿಕಾರ ಎಂಬುದು ಶಾಶ್ವತವಲ್ಲ ತಮಗೆ ಅಧಿಕಾರ ಸಿಕ್ಕಾಗ ಬದಲಾವಣೆ ಮಾಡುವುದು ಅವರ ಜವಾಬ್ದಾರಿಯಾಗಬೇಕು ಸೊಸೈಟಿ ಕಟ್ಟಡವು ರೈತರ ಸ್ವತ್ತು ಆಗಿದ್ದು ಇಲ್ಲಿಂದ ಹೋಬಳಿಯ ರೈತರಿಗೆ ಮಾಹಿತಿ, ಮಾರ್ಗದರ್ಶನ ನಿರಂತರವಾಗಿ ನೀಡಬೇಕು ಸೊಸೈಟಿಗೆ ಸ್ವಂತ ಜಾಗವನ್ನು ಮಂಜೂರು ಮಾಡಿದ್ದರು ಕಾರಣಾಂತರಗಳಿಂದ ಸಮಸ್ಯೆಯಾಗಿತ್ತು ಕೂಡಲೇ ಜಿಲ್ಲಾಧಿಕಾರಿಯೊಂದಿಗೆ ಮಾತಾಡಿ ಆದಷ್ಟು ಬೇಗ ಸಮಸ್ಯೆ ಇತ್ಯರ್ಥ ಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಕ್ಕಲೇರಿ ರೇಷ್ಮೆ ಬೆಳಗಾರರ ಹಾಗೂ ರೈತರ ಸಹಕಾರ ಸಂಘದ‌ ಅಧ್ಯಕ್ಷ ಎಂ.ಪಾಲಾಕ್ಷಗೌಡ ಮಾತನಾಡಿ, ಸೊಸೈಟಿಯಲ್ಲಿ ಈ ಸಾಲಿನಲ್ಲಿ 23.39 ಲಕ್ಷದಷ್ಟು ಲಾಭವನ್ನು ಗಳಿಸಿದೆ ಈ ವರ್ಷವು ಸಹ ರೈತರಿಗೆ ಮಹಿಳಾ ಸಂಘಗಳಿಗೆ ಹಾಗೂ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಸಾಲ ನೀಡುವ ಮೂಲಕ ಜಿಲ್ಲೆಗೆ ಮಾದರಿ ಸೊಸೈಟಿಯಾಗಿ ಮಾಡಿದ್ದೇವೆ ರೈತ ಭವನದ ನಿರ್ಮಾಣಕ್ಕೆ 37.50 ಲಕ್ಷದಷ್ಟು ದಾನಿಗಳ ಮೂಲಕವೇ ಪಡೆದಿದ್ದು ಇದರಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ 15 ಲಕ್ಷವನ್ನು ಅಪೆಕ್ಸ್ ಬ್ಯಾಂಕ್ ಮೂಲಕ ಮತ್ತು ಮಾಜಿ‌ ಕೆ.ಶ್ರೀನಿವಾಸಗೌಡ 4 ಲಕ್ಷ ಸೇರಿದ್ದು ಉಳಿದ ಹಣವನ್ನು ದಾನಿಗಳಿಂದ ಪಡೆದಿದ್ದು ಎಂಎಲ್ಸಿ ಅನಿಲ್ ಕುಮಾರ್ ಅವರು 10 ಲಕ್ಷ ಕೊಡತ್ತೇವೆ ಎಂದು ಹೇಳಿದ್ದು ಇದುವರೆಗೂ ಕೊಟ್ಟಿಲ್ಲ ಎಂದರು,

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಜೆಡಿಎಸ್ ಮುಖಂಡ ವಕ್ಕಲೇರಿ ರಾಮು, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಅಂಬರೀಶ್, ಕ್ರಿಯಾಜಿನ್ ಸಂಸ್ಥೆಯ ಮಂಜುನಾಥ್ ಯಾದವ್, ನಾರಾಯಣಸ್ವಾಮಿ, ಶ್ರೀಕಾಂತ್, ಸತೀಶ್, ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮುದವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ನಿರ್ದೇಶಕರಾದ ಎಂ.ಆನಂದ್ ಕುಮಾರ್, ಆರ್.ಚಂದ್ರೇಗೌಡ, ವೆಂಕಟಗಿರಿಯಪ್ಪ, ಟಿ.ಮುನಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್.ಕೃಷ್ಣಪ್ಪ, ಬಿ.ಎನ್ ಚಿದಾನಂದ, ಎಂ ರಮೇಶ್, ಚೌಡಮ್ಮ, ಶಾಂತಕುಮಾರಿ ಕಾರ್ಯದರ್ಶಿ ಎಂ.ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

41 minutes ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

3 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

6 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

7 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

10 hours ago