ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ RDPR ದೊಡ್ಡಬಳ್ಳಾಪುರ ವತಿಯಿಂದ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ರಣರೋಚಕ ಫೈನಲ್ ಪಂದ್ಯದಲ್ಲಿ ಪೊಲೀಸ್ ಇಲಾಖೆ ಕಡೆಯ ಓವರ್ ನಲ್ಲಿ ಆರ್ ಡಿಪಿಆರ್ ಎದುರು ವಿಜಯ ಸಾಧಿಸಿ 2023-24ನೇ ಸಾಲಿನ ಸೌಹಾರ್ದ ಕ್ರಿಕೆಟ್ ಕಪ್ ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ(RDPR) ತಂಡ ರನ್ನರ್ಸ್ ಪ್ರಶಸ್ತಿ ಪಡೆಯಿತು. ಕಂದಾಯ ಇಲಾಖೆ ತಂಡ ಹಾಗೂ ಮಾಧ್ಯಮ ಬಳಗ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವು.
ದ್ವಿತೀಯ ಪಂದ್ಯ ಕಂದಾಯ ಇಲಾಖೆ ಹಾಗೂ ಆರ್ ಡಿಪಿಆರ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್ ಡಿಪಿಆರ್ ವಿಜಯ ಸಾಧಿಸಿತು. ಮೂರನೇ ಸ್ಥಾನಕ್ಕಾಗಿ ನಡೆದ ಪೈಫೋಟಿಯಲ್ಲಿ ಕಂದಾಯ ಇಲಾಖೆಯ ಆಟಗಾರರು ಮಾಧ್ಯಮ ಬಳಗಕ್ಕೆ ಸೋಲುಣಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಕ್ರೀಡಾಂಗಣಕ್ಕೆ ಆಗಮಿಸಿ ಎಲ್ಲ ತಂಡದ ಅಟಗಾರರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಮುನಿಕೃಷ್ಣ ನಗರ ಠಾಣೆ ಪಿಐ ಅಮರೇಶ್ ಗೌಡ, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಪಿಐ ಎಂ.ಆರ್.ಹರೀಶ್, ಹೊಸಹಳ್ಳಿ ಠಾಣೆ ಪಿಐ ರಾವ್ ಗಣೇಶ್ ಇತರರು ಇದ್ದರು.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…