Categories: Accident

ಸ್ಕೂಲ್ ಬಸ್ ಹಾಗೂ ಬೈಕ್ ಅಪಘಾತ: ಇಬ್ಬರು ಮಕ್ಕಳು ಸಾ*ವು

ಶಾಲಾ ಬಸ್​ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿದೆ.

ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು.

ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್​​ಗೆ​ ಡಿಕ್ಕಿ ಹೊಡೆದು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ ಮೂಲದ ನಾಗನಗೌಡ ಅವರು ಸಿಎಆರ್​ನಲ್ಲಿ ಕಾನ್ಸ್​ಟೇಬಲ್​​ ಆಗಿದ್ದಾರೆ. ತಮ್ಮ ಮಗಳು ವರ್ಷ ಮತ್ತು ಅಣ್ಣನ ಮಗಳಾದ ಭಾನು ಅನ್ನು ಬೈಕ್​ನಲ್ಲಿ ಕೂರಿಸಿಕೊಂಡು ಹಾಲು ತರಲು ಹೋಗುತ್ತಿದ್ದರು. ಇದೇ ವೇಳೆ ಸ್ಕೂಲ್ ಟೈಮ್​​ ಆಗಿದ್ದರಿಂದ ಬಸ್ ಮಕ್ಕಳ ಪಿಕಪ್​ಗೆ ತೆರಳುತ್ತಿತ್ತು. ಬಸ್​ ಬರುವುದನ್ನು ಕಂಡು ನಾಗನಗೌಡ ಅವರು ಬೈಕ್ ನಿಲ್ಲಿಸಿದ್ದರು.

ಹೆಣ್ಣೂರು ಸಂಚಾರಿ ಠಾಣೆ ವ್ಯಾಪ್ತಿಯ ಥಣಿಸಂದ್ರ ಬಳಿ ಶಾಲಾ ಬಸ್​ ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್​ನಿಂದ ಕೆಳಗೆ ಬಿದ್ದ ಇಬ್ಬರು ಮಕ್ಕಳ ಮೇಲೆ ಬಸ್ ಹಿಂಬದಿ ಚಕ್ರ ಹರಿದಿದೆ. ಕೂಡಲೇ ಮಕ್ಕಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕಾನ್ಸ್​ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇನ್ನು ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರು ಜಮಾಯಿಸಿದ್ದು, ಮಕ್ಕಳನ್ನ‌ ಕಳೆದುಕೊಂಡ ಹಿನ್ನಲೆ  ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಹೆಣ್ಣೂರು ಸಂಚಾರ ಪೊಲೀಸರು ಶಾಲಾ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

12 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

12 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

13 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

19 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

21 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

24 hours ago