ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಇದು ಸ್ಪಷ್ಟವಾಗಿ ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲದೆ ಇದ್ದರೂ ಇದನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ನನ್ನ ವಿರುದ್ದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಹೆಸರಿನ ಉಲ್ಲೇಖ ಇರುವ ಈ ಸ್ಟಿಂಗ್ ಆಪರೇಷನ್ ವಿಡಿಯೋ ಅನ್ನು ಯಾವುದೇ ಪತ್ರಿಕೆ, ಚಾನೆಲ್ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಇಲ್ಲವೇ ಪ್ರಸಾರ ಮಾಡದಂತೆ ತಡೆನೀಡಬೇಕು ಎಂದು ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ವಿಷಯದಲ್ಲಿ ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ. ತೆರೆದ ಪುಸ್ತಕದಂತಿರುವ ನನ್ನ ಐದು ದಶಕಗಳ ರಾಜಕೀಯ ಜೀವನದ ಅರಿವು ಇರುವ ರಾಜ್ಯದ ಜನತೆಗೂ ಇದು ಗೊತ್ತಿದೆ ಎನ್ನುವ ವಿಶ್ವಾಸ ನನಗಿದೆ. ಆದರೆ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುಳ್ಳನ್ನು ಸತ್ಯವಾಗಿ ಬಿಂಬಿಸುವುದು ಸುಲಭದ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ನಾನು ನ್ಯಾಯಾಲಯದ ಮೆಟ್ಟಿಲು ಏರಿದ್ದೇನೆಯೇ ಹೊರತು ಉಳಿದಂತೆ ಯಾವ ಭಯವೂ ನನಗಿಲ್ಲ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎನ್ನುವ ವಿಶ್ವಾಸವೂ ನನಗಿದೆ ಎಂದು ಹೇಳಿದ್ದಾರೆ.

ನಾನು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು. ಇಲ್ಲಿಯ ವರೆಗಿನ ನನ್ನ ರಾಜಕೀಯ ಜೀವನದಲ್ಲಿ ನಾನೆಂದೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸಿದವನಲ್ಲ. ಆದರೆ ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ-ಪ್ರಸಾರಕ್ಕೆ ತಡೆಯಾಜ್ಞೆ ತರಬೇಕಾದ ಪ್ರಸಂಗ ಬಂದಿದೆ. ಈ ಬಗ್ಗೆ ನನಗೆ ವಿಷಾದವಿದೆ ಎಂದಿದ್ದಾರೆ.

ಈ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ನಾನು ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಆ ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸವೂ ನನಗಿದೆ. ಅಲ್ಲಿಯ ವರೆಗೆ ಮಾಧ್ಯಮಗಳು ಮಾತ್ರವಲ್ಲ ಸಾರ್ವಜನಿಕರು ಕೂಡಾ ಅನಗತ್ಯವಾಗಿ ಇಂತಹ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡದೆ ಸತ್ಯದ ಪರವಾಗಿ ನಿಲ್ಲಬೇಕೆಂದು ಕೋರುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ…

5 hours ago

ಮೀಸಲಾತಿ ಹೆಚ್ಚಳ ವಿಚಾರ: ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಕುರಿತು ಸಂಪುಟದಲ್ಲಿ ಚರ್ಚೆ- ಡಿಸಿಎಂ ಡಾ ಜಿ.ಪರಮೇಶ್ವರ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ…

9 hours ago

ಕರ್ನಾಟಕದ ನೂತನ ರಾಜ್ಯಪಾಲರು ಯಾರು ಗೊತ್ತಾ…?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ…

23 hours ago

ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದ ಜಿ. ಲಕ್ಷ್ಮೀಪತಿ

ದೊಡ್ಡಬಳ್ಳಾಪುರ: ಹುಟ್ಟುಹಬ್ಬವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ-2026: ಅಂತಿಮ ಮತದಾರ ಪಟ್ಟಿಯಲ್ಲಿ 2863 ಶಿಕ್ಷಕ ಮತದಾರರು : ಡಿಸಿ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದ ಅಂತಿಮ…

1 day ago

ಸಿಮೆಂಟ್ ಲಾರಿ–ಕಂಟೇನರ್ ನಡುವೆ ಅಪಘಾತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಗೋದಿ ಮಿಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ಸಿಮೆಂಟ್ ಲಾರಿ…

1 day ago