ಸ್ಟೀರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರೀ ಅನಾಹುತ: ರಸ್ತೆ ಗುಂಡಿಗಳೇ ಅವಘಡಕ್ಕೆ ಕಾರಣ ಎಂಬ ಶಂಕೆ

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೀರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಮಂಚೇನಹಳ್ಳಿಯಿಂದ ದೊಡ್ಡಬಳ್ಳಾಪುರಕ್ಕೆ ಬರುವ ಮಾರ್ಗದ ತೂಬಗೆರೆ ಹೋಬಳಿಯ ದೊಡ್ಡತಿಮ್ಮನಹಳ್ಳಿ ಸಮೀಪದ ಖಾಸಗಿ ಶಾಲೆಯ ಬಳಿ ಬೆಳಗ್ಗೆ ಸುಮಾರು 6.30ರ ವೇಳೆಗೆ ಈ ಅವಘಡ ಸಂಭವಿಸಿದೆ.

ಮಂಚೇನಹಳ್ಳಿ-ದೊಡ್ಡಬಳ್ಳಾಪುರ ಮಾರ್ಗದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅಲ್ಲಲ್ಲಿ ಬಿದ್ದಿರುವ ಗುಂಡಿಗಳಿಂದ ವಾಹನ ಸವಾರರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಗುಂಡಿಗಳಲ್ಲಿ ಹಾದುಹೋಗುವ ಸಂದರ್ಭದಲ್ಲಿ ಸ್ಟೀರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಪರಿಣಾಮ ಬಸ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾದ ಪರಿಣಾಮ ವಿದ್ಯುತ್ ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹದಗೆಟ್ಟ ರಸ್ತೆಗಳು ಹಾಗೂ ರಸ್ತೆ ಗುಂಡಿಗಳಿಂದಾಗಿ ಇಂತಹ ಅವಘಡಗಳು ಸಂಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಕರು ಮತ್ತು ಸದಸ್ಯರ ನೇಮಕ: ಜಿಲ್ಲಾವಾರು ಪಟ್ಟಿ ಪ್ರಕಟ

ರಾಜ್ಯದ 80ಕ್ಕೂ ಹೆಚ್ಚು ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಒಟ್ಟು 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ…

11 hours ago

ಇನ್ನೇನು ನಾಲ್ಕು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ವಿಧಿಯ ಕ್ರೂರ ಆಟಕ್ಕೆ ಬಲಿ: ಕೈಯಲ್ಲಿ ಮದುವೆ ಆಮಂತ್ರಣ ಪತ್ರ ಹಿಡಿದೇ ಸಾವಿನ ಮನೆ ಸೇರಿದ ನವವಧು

ಮನೆಯಲ್ಲಿ ಮದುವೆಯ ಸಂಭ್ರಮ ಮನೆಮಾಡಿತ್ತು. ಇನ್ನೇನು ನಾಲ್ಕೇ ನಾಲ್ಕು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಕೆಯ ಕೈಗಳಿಗೆ ಮೆಹಂದಿ ರಂಗು ಏರಬೇಕಿತ್ತು.…

12 hours ago

ಕನ್ನಡ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆ ಕಾಪಾಡುವುದು ಪ್ರತಿಯೊಬ್ಬರ ಹೊಣೆ- ಕರ್ನಾಟಕದಲ್ಲಿ ನೆಲೆಸುವ ಅನ್ಯಭಾಷಿಕರು ಕನ್ನಡ ಭಾಷೆಗೆ ನಿಷ್ಠರಾಗಿರಬೇಕು- ಹಂಸಲೇಖ

ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ಎಲ್ಲ ಭಾಷೆಗಳ ಜನರು ನೆಲೆಸಿದ್ದಾರೆ. ಆದರೆ ಬೇರೆ ಭಾಷೆಯವರು ಯಾರೇ ಆಗಿರಲಿ, ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡ…

12 hours ago

ಬೆಲೆ ಏರಿಕೆ, ವಿದ್ಯುತ್ ಅಭಾವ, ಭೂಸ್ವಾಧೀನ ನೀತಿ ಖಂಡಿಸಿ ಜೆಡಿಎಸ್ ಪ್ರತಿಭಟನೆ: ಹಳ್ಳಿ ಗುಗ್ಗುಗಳ ಶಕ್ತಿ ಏನೆಂಬುದು ಸರ್ಕಾರಕ್ಕೆ ತೋರಿಸುತ್ತೇವೆ- ಹರೀಶ್ ಗೌಡ

ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ಸಮಸ್ಯೆಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ಅವ್ಯವಸ್ಥೆ…

13 hours ago

₹50 ಸಾವಿರ ಲಂಚ ಸ್ವೀಕರಿಸುವಾಗ ನಗರಸಭೆ ಆಯುಕ್ತ ಎಸಿಬಿ ಬಲೆಗೆ: ಬಾಕಿ ಬಿಲ್ ಪಾವತಿಗೆ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ; ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿ ಹಣ ಪತ್ತೆ

ನಿರ್ಮಲ್: ಗುತ್ತಿಗೆದಾರನಿಗೆ ಬಾಕಿ ಉಳಿದಿದ್ದ ಕಾಮಗಾರಿಗಳ ಹಣ ಬಿಡುಗಡೆ ಮಾಡಲು ₹50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಭೈಂಸಾ ನಗರಸಭೆಯ ಪ್ರಭಾರ…

1 day ago

ಸರ್ಕಾರದ ನೀತಿಗಳ ವಿರುದ್ಧ ನಾಳೆ ಜೆಡಿಎಸ್ ಬೃಹತ್ ಪ್ರತಿಭಟನೆ: ಬಸ್ ಪ್ರಯಾಣ ದರ ಏರಿಕೆ, ವಿದ್ಯುತ್ ಸಮಸ್ಯೆ, ರೈತರ ನಿರ್ಲಕ್ಷ್ಯ ಖಂಡಿಸಿ ಹೋರಾಟ- ಹರೀಶ್ ಗೌಡ

ದೊಡ್ಡಬಳ್ಳಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ವಿವಿಧ ಇಲಾಖೆಗಳಲ್ಲಿನ ಸಮಸ್ಯೆಗಳನ್ನು ಖಂಡಿಸಿ…

2 days ago