Categories: ಕೋಲಾರ

ಸ್ಥಳೀಯ ಕಲಾವಿದರಿಗೆ ಪೋತ್ಸಾಹ ಅಗತ್ಯವಾಗಿದೆ- ಶಾಸಕ ಜಿ‌.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯ

ಕೋಲಾರ:ಗ್ರಾಮೀಣ ಭಾಗದಲ್ಲಿ ಕಲೆಗೆ ಕೊರತೆಯಿಲ್ಲ ಅವರನ್ನು ಗುರುತಿಸಿ ಪ್ರೋತ್ಸಾಹ ಮಾಡುವ ಮೂಲಕ ಸ್ಥಳೀಯ ಕಲಾವಿದರಿಗೆ ಮೊದಲ ಅಧ್ಯತೆ ನೀಡಿದಾಗ ಸಮಾಜದಲ್ಲಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ತಿಳಿಸಿದರು.

ತಾಲೂಕಿನ ಸುಗಟೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಶ್ರೀ ವೀರಬ್ರಹ್ಮೇಂದ್ರಸ್ವಾಮಿ ಸೇವಾ ಸಮಿತಿ ಮತ್ತು ಸವಿತಾ ಸಮಾಜ ವತಿಯಿಂದ ನಾಲ್ಕನೇ ವರ್ಷದ ಗುರು ಪೂರ್ಣಿಮ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮಲ್ಲಿ ಕಲಾವಿದರ ಕೊರತೆ ಇಲ್ಲ ಆದರೆ ಇಲ್ಲಿ ಅವರಿಗೆ ಅವಕಾಶದ ಕೊರತೆ ಇದೆ, ಅವರನ್ನು ಗುರುತಿಸಿ ಕಲೆಗೆ ಪ್ರೋತ್ಸಾಹ ನೀಡುವ ಮನಸ್ಸುಗಳು ನಮ್ಮಲ್ಲಿಯೇ ಹೆಚ್ಚಾಗಬೇಕು ಕಲೆಯೆಂಬುದು ಒಬ್ಬರ ಸ್ವತ್ತಲ್ಲ, ಕಲೆಯು ಜಾತಿ, ಮತ, ಪ್ರಾದೇಶಿಕತೆ, ಗಡಿಯನ್ನು ಮೀರಿದಂತಹದ್ದು ಎಂದರು.

ಸವಿತಾ ಸಮಾಜದ ಬಂಧುಗಳು ಸಮಾಜದಲ್ಲಿ ಯಾರಿಗೂ ತೊಂದರೆ ಕೊಡದೇ ತಮ್ಮ ಕೆಲಸವನ್ನು ಮಾಡಿಕೊಂಡು ಗೌರವಯುತವಾದ ಬದುಕು ಕಂಡುಕೊಂಡಿದ್ದಾರೆ ಅ ಸಮದಾಯದ ಅಭಿವೃದ್ಧಿಗಾಗಿ ವಯಕ್ತಿಕವಾಗಿ ಹಾಗೂ ಸರಕಾರದಿಂದ ಸಹಾಯ ಮಾಡಲು ಸಿದ್ದನಿದ್ದೇನೆ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಜೊತೆಗೆ ಕ್ಷೇತ್ರದಲ್ಲಿನ ನಿರುದ್ಯೋಗ ಯುವಕರಿಗೆ ಉದ್ಯೋಗಕ್ಕಾಗಿ ಐದು ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಗಳು ಸ್ಥಾಪನೆಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಅನುಮೋದನೆ ಮಾಡಿಸಲಾಗಿದೆ ಗ್ರಾಮೀಣ ರಸ್ತೆಗಳು ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಾ ಇದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು

ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಸನ್ಮಾನ ಸ್ವೀಕರಿಸಿ ಮಾತನಾಡಿ ಸುಗಟೂರಿಗೆ ಐತಿಹಾಸಿಕ ಪರಂಪರೆ ಇದೆ ಈ ಗ್ರಾಮವನ್ನು ಮಾದರಿಯಾಗಿ ಗುರುತಿಸಿಕೊಳ್ಳುವಂತೆ ಮಾಡಬೇಕಾಗಿದೆ ಈ ಗ್ರಾಮದಿಂದ ಪೋತ್ಸಾಹಿಸಿದ್ದರಿಂದಾಗಿ ನಿಮ್ಮ ಹುಡುಗ ಇವತ್ತು ಅಕ್ಕ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಬಂದಿದೆ ಕಲೆಯನ್ನು ನಾವು ಪ್ರೀತಿ ಗೌರವದಿಂದ ಕಂಡಾಗ ಕಲೆ ನಮ್ಮ ಬದುಕು ಕಟ್ಟಿಕೊಡುತ್ತದೆ ಪ್ರತಿ ಗ್ರಾಮದಲ್ಲಿ ಕಲಾವಿದರು ಇದ್ದು ಅವರನ್ನು ಪೋತ್ಸಾಹಿಸವ ಕೆಲಸವನ್ನು ಗ್ರಾಮ ಮಟ್ಟದಿಂದಲ್ಲೇ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಸದಸ್ಯ ಎಸ್.ವಿ ನಾರಾಯಣಗೌಡ, ಮುಖಂಡರಾದ ಕಿಟ್ಟೇಗೌಡ, ಗೋಪಾಲಗೌಡ, ಉರಗಲಿ ನಾರಾಯಣಸ್ವಾಮಿ, ಸುಬ್ರಮಣಿ, ಮಂಜುನಾಥ್ ಮುಂತಾದವರು ಇದ್ದರು ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರನ್ನು ಸನ್ಮಾನಿಸಲಾಯಿತು ರಾತ್ರಿಯಿಡೀ ವಿವಿಧ ತಂಡಗಳಿಂದ ನಾದಸ್ವರ, ವಾದ್ಯ, ಭಜನೆ, ಪ್ರವಚನ ಕಾರ್ಯಕ್ರಮಗಳನ್ನು ಸೋಮವಾರ ಬೆಳಗ್ಗಿನ ತನಕ ಹಮ್ಮಿಕೊಳ್ಳಲಾಗಿತ್ತು,

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

2 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

3 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

4 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

13 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

14 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

16 hours ago