ದೊಡ್ಡಬಳ್ಳಾಪುರ: ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರ ನೇಮಕಾತಿ ವಿಳಂಬ, ಸ್ಥಳೀಯ ಶಾಸಕರು ಶಿಷ್ಟಾಚಾರ ಪಾಲನೆ ಮಾಡದಿರುವುದು ಸೇರಿದಂತೆ ಕ್ಷೇತ್ರದ ವಿವಿಧ ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ದೊಡ್ಡಬಳ್ಳಾಪುರದ ಮುಖಂಡರು ಇಂದು ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಅವರು ತಿಳಿಸಿದರು.
ನಿಗಮ- ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದರು. ಅಲ್ಲದೆ, ಸ್ಥಳೀಯ ಶಾಸಕರು ಶಿಷ್ಟಾಚಾರವನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂಬ ಅಸಮಾಧಾನವನ್ನೂ ಸಚಿವರ ಗಮನಕ್ಕೆ ತಂದಿದ್ದೇವೆ ಎಂದರು.
ಇದೇ ವೇಳೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಕಾಮಗಾರಿಗಳ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಬೇಕು ಎಂದು ಒತ್ತಾಯಿಸಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ದೊಡ್ಡಬಳ್ಳಾಪುರದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ದೀಪಾವಳಿ ಪಟಾಕಿ ಎಂದು ಭಾವಿಸಿ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ ಪರಿಣಾಮ ಭೀಕರ ಸ್ಫೋಟ…
ದೇವನಹಳ್ಳಿ: ತಡರಾತ್ರಿ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ದೇವನಹಳ್ಳಿ ಪಟ್ಟಣದ ಇಬ್ಬರು ಪ್ರಾಣ ಸ್ನೇಹಿತರು ಸ್ಥಳದಲ್ಲೇ…
ದೊಡ್ಡಬಳ್ಳಾಪುರ: ಬೆಳಕಿನ ಹಬ್ಬದ ಸಂಭ್ರಮದಲ್ಲಿ ಸಿಡಿಸಿದ ಪಟಾಕಿಯೊಂದು 12 ವರ್ಷದ ಬಾಲಕನ ಬದುಕಿನಲ್ಲಿ ಕತ್ತಲು ಮೂಡಿಸಿದೆ. ಬೇರೆಯವರು ಸಿಡಿಸಿದ ರಾಕೆಟ್…
ದೊಡ್ಡಬಳ್ಳಾಪುರ: ನಗರದ ಭಗತ್ ಸಿಂಗ್ ಮೈದಾನದ ರಸ್ತೆಯಲ್ಲಿ ಬಾಯ್ತೆರೆದಿರುವ ಚರಂಡಿ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದು, ರಸ್ತೆಯಲ್ಲಿನ ಗುಂಡಿ ತಪ್ಪಿಸುವ…
ದೊಡ್ಡಬಳ್ಳಾಪುರ: ನಗರದ ತೆರಿನಬೀದಿ ವೃತ್ತದ ಬಳಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ವಾಲ್ಮೀಕಿ ಭವನದ ಕಟ್ಟಡ ಕಾಮಗಾರಿ ಕಳೆದ ಮೂರು ವರ್ಷಗಳಿಂದ ಅನುದಾನದ…
ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿ ಬಂದು ಅಹವಾಲು ಸ್ವೀಕರಿಸಿ ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ಶನಿವಾರ…