ಕೋಲಾರ: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 16ನೇ ವಾರ್ಡ್‌ನ ಸದಸ್ಯ ಎ.ಫೈರೋಜ್ ಖಾನ್ ಅವಿರೋಧವಾಗಿ ಆಯ್ಕೆಯಾದರು
ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವಿರೋಧ ಆಯ್ಕೆ ನಡೆಯದೇ ಚುನಾವಣೆ ನಡೆಸುವಂತೆ ಕೆಲ ಸದಸ್ಯರು ಒತ್ತಾಯಿಸಿದರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕೇವಲ ಏಳು ಮಂದಿ ಮಾತ್ರವೇ ಸಲ್ಲಿಸಿದ್ದರಿಂದ ಸದಸ್ಯರು ಅವಿರೋಧ ಆಯ್ಕೆಯಾದರು ಸದಸ್ಯರೆಲ್ಲಾ ಸೇರಿ ಎ.ಫೈರೋಜ್ ಖಾನ್ ಅವರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಮಾಡಿದರು.
ಈ ಹಿಂದೆ ಖಾಲಿಯಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷಗಾದಿಗೆ ಶಾಸಕ ಕೊತ್ತೂರು ಮಂಜುನಾಥ್ ಬಣ ಮತ್ತು ಮಾಜಿ ಅಧ್ಯಕ್ಷ ಮುಬಾರಕ್ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಚುನಾವಣೆ ಘೋಷಣೆ ಮಾಡಿದ ನಂತರ ಫೈರೋಜ್ ಖಾನ್ ಅವರಿಗೆ ಅಧ್ಯಕ್ಷಗಾದಿಯ ಪಟ್ಟ ಒಲಿಯಿತು.
ನಂತರ ಮಾತನಾಡಿದ ನೂತನ ಅಧ್ಯಕ್ಷ ಫೈರೋಜ್ ಖಾನ್ ನನ್ನ ಆಯ್ಕೆಗೆ ಸಹಕರಿಸಿದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ನಜೀರ್ ಆಹಮ್ಮದ್, ಅನಿಲ್‌ಕುಮಾರ್ ಹಾಗೂ ನಗರಸಭೆ ಅಧ್ಯಕ್ಷರು, ಸದಸ್ಯರು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತೇನೆ ನಗರಕ್ಕೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ, ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಸೇರಿದಂತೆ ನಗರದ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಉಪಾಧ್ಯಕ್ಷೆ ಸಂಗೀತಾ, ನೂತನ ಸ್ಥಾಯಿ ಸಮಿತಿ ಸದಸ್ಯರಾಗಿ ಷಮಾತಾಜ್, ಎನ್ ಅಂಬರೀಶ್, ನಗ್ಮಭಾನು, ಸುರೇಶ್ ಬಾಬು, ಪ್ರವೀಣ್ ಗೌಡ ಸೇರಿದಂತೆ ನಗರಸಭೆ ಸದಸ್ಯರು ಮುಖಂಡರು ಇದ್ದರು.
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…