Categories: ಕೋಲಾರ

ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಫೈರೋಜ್ ಖಾನ್ ಅವಿರೋಧ ಆಯ್ಕೆ

ಕೋಲಾರ: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 16ನೇ ವಾರ್ಡ್‌ನ ಸದಸ್ಯ ಎ.ಫೈರೋಜ್ ಖಾನ್ ಅವಿರೋಧವಾಗಿ ಆಯ್ಕೆಯಾದರು

ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವಿರೋಧ ಆಯ್ಕೆ ನಡೆಯದೇ ಚುನಾವಣೆ ನಡೆಸುವಂತೆ ಕೆಲ ಸದಸ್ಯರು ಒತ್ತಾಯಿಸಿದರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕೇವಲ ಏಳು ಮಂದಿ ಮಾತ್ರವೇ ಸಲ್ಲಿಸಿದ್ದರಿಂದ ಸದಸ್ಯರು ಅವಿರೋಧ ಆಯ್ಕೆಯಾದರು ಸದಸ್ಯರೆಲ್ಲಾ ಸೇರಿ ಎ.ಫೈರೋಜ್ ಖಾನ್ ಅವರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಮಾಡಿದರು.

ಈ ಹಿಂದೆ ಖಾಲಿಯಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷಗಾದಿಗೆ ಶಾಸಕ ಕೊತ್ತೂರು ಮಂಜುನಾಥ್ ಬಣ ಮತ್ತು ಮಾಜಿ‌ ಅಧ್ಯಕ್ಷ ಮುಬಾರಕ್ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಚುನಾವಣೆ ಘೋಷಣೆ ಮಾಡಿದ ನಂತರ ಫೈರೋಜ್ ಖಾನ್ ಅವರಿಗೆ ಅಧ್ಯಕ್ಷಗಾದಿಯ ಪಟ್ಟ ಒಲಿಯಿತು.

ನಂತರ ಮಾತನಾಡಿದ ನೂತನ ಅಧ್ಯಕ್ಷ ಫೈರೋಜ್ ಖಾನ್‌ ನನ್ನ ಆಯ್ಕೆಗೆ ಸಹಕರಿಸಿದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್‌ ಸದಸ್ಯರಾದ ನಜೀರ್ ಆಹಮ್ಮದ್, ಅನಿಲ್‌ಕುಮಾರ್ ಹಾಗೂ ನಗರಸಭೆ ಅಧ್ಯಕ್ಷರು, ಸದಸ್ಯರು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತೇನೆ ನಗರಕ್ಕೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ, ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಸೇರಿದಂತೆ ನಗರದ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಎಲ್ಲಾ ಸದಸ್ಯರನ್ನು ವಿ‌ಶ್ವಾಸಕ್ಕೆ ತೆಗೆದುಕೊಂಡು ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಉಪಾಧ್ಯಕ್ಷೆ ಸಂಗೀತಾ, ನೂತನ ಸ್ಥಾಯಿ ಸಮಿತಿ ಸದಸ್ಯರಾಗಿ ಷಮಾತಾಜ್, ಎನ್ ಅಂಬರೀಶ್, ನಗ್ಮಭಾನು, ಸುರೇಶ್ ಬಾಬು, ಪ್ರವೀಣ್ ಗೌಡ ಸೇರಿದಂತೆ ನಗರಸಭೆ ಸದಸ್ಯರು ಮುಖಂಡರು ಇದ್ದರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

4 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

24 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago