ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತ- ಎಲ್ಲಾ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ಬೆoಗಳೂರು ಗ್ರಾಮಾoತರ ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಎoದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದ್ದಾರೆ.

2011ರಲ್ಲಿ ಬೆಂಗಳೂರು ನಗರ ಜಿಲ್ಲೆ ಮತ್ತು 2024 ರಲ್ಲಿ ಮಾರ್ಚ್‌ನಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.
ಇದು ಆ ಜಿಲ್ಲೆಯಲ್ಲಿ ಯಶಸ್ವಿಯಾಗುತ್ತಿರುವ ಕಾರಣ ರಾಜ್ಯಾದ್ಯಂತ ಇದನ್ನು ವಿಸ್ತರಿಸಲಾಗಿದೆ. ಅದರಂತೆ ಜಿಲ್ಲೆಯ ಉಪನೋಂದಣಿ ಕಚೇರಿಯಲ್ಲೂ ನೋಂದಣಿಗ ಅವಕಾಶ ಕಲ್ಪಿಸಲಾಗಿದೆ. ಎಲ್ಲಿಯಾದರು (Any Where) ನೋಂದಣಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎಲ್ಲಿಯಾದರು ನೋಂದಣಿಯಲ್ಲಿ ದಸ್ತಾವೇಜಿನ ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರು ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಈ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು.

ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ.

ಇದರಿoದ ಉಪನೋಂದಣಿ ಕಛೇರಿಯಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಆದುದರಿಂದ ಸಾರ್ವಜನಿಕರು ಎಲ್ಲಿಯಾದರು (Any Where) ನೋಂದಣಿಯ ಸೌಲಭ್ಯದ ಸದುಪಯೋಗ ಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಪಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳ ಬಹುದಾಗಿದೆ. ಉದಾಹರಣೆಗೆ ನೆಲಮಂಗಲ ಉಪನೋಂದಣಿ ಕಚೇರಿ, ವ್ಯಾಪ್ತಿಗೆ ಬರುವ ಸ್ವತ್ತುಗಳನ್ನು ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಯಾವುದಾದರು ಒಂದು ಉಪನೋಂದಣಿ ಕಚೇರಿಯಲ್ಲಿ ಆಯ್ಕೆ ಮಾಡಿಕೊಂಡು ನೋಂದಣಿ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿರುತ್ತದೆ]

ಈ ಸೌಲಭ್ಯವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಪಟ್ಟ ತಾಲ್ಲೂಕುಗಳಾದ ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಮತ್ತು ದೊಡ್ಡಬಳ್ಳಾಪುರ, ಉಪನೋಂದಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಆಸ್ತಿಗಳನ್ನು ಜಿಲ್ಲೆಯ ಯಾವುದೇ ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ
ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 hour ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

10 hours ago