Categories: ಕೋಲಾರ

ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಎಸ್‌ಎಫ್‌ಐ ವಿರೋಧ: ಕೂಡಲೇ ಶುಲ್ಕ ಹೆಚ್ಚಳ ಆದೇಶವನ್ನು ವಾಪಸ್ ಪಡೆಯುವಂತೆ ಮನವಿ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳವನ್ನು ವಿರೋಧಿಸುವುದರ ಜೊತೆಗೆ ಕೂಡಲೇ ಶುಲ್ಕ ಹೆಚ್ಚಳ ಆದೇಶವನ್ನು ವಾಪಸ್ ಪಡೆಯುವಂತೆ ಎಸ್‌ಎಫ್‌ಐ ಸಂಘಟನೆಯಿಂದ ವಿವಿ ಪ್ರಭಾರಿ ಕುಲಪತಿ ಪ್ರೊ. ಕುಮದಾ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಅಂಬ್ಲಿಕಲ್ ಶಿವಪ್ಪ ಮಾತನಾಡಿ, ಕಳೆದ ವರ್ಷ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕವು ಎಸ್ಸಿ ಎಸ್ಟಿಗೆ 335 ರೂ., ಒಬಿಸಿ ಹಾಗೂ ಪ್ರವರ್ಗ 1ಕ್ಕೆ 13000, ಸಾಮಾನ್ಯ ವರ್ಗಕ್ಕೆ 18000 ಮತ್ತು ಪೇಮೆಂಟ್ ಶುಲ್ಕ18000 ಇತ್ತು. ಆದರೆ, ಈ ವರ್ಷ ಏಕಾಏಕಿ ವಿಶ್ವವಿದ್ಯಾಲಯವು ಎಸ್ಸಿ, ಎಸ್ಟಿ, ಒಬಿಸಿ ಪ್ರವರ್ಗ ಒಂದಕ್ಕೆ 19050 ರೂ. ಮತ್ತು ಪೇಮೆಂಟ್ ಶುಲ್ಕ ಎಸ್ಸಿ, ಎಸ್ಟಿಗೆ 39930, ಸಾಮಾನ್ಯ ವರ್ಗಕ್ಕೆ 58980 ರೂ. ಏರಿಕೆ ಮಾಡಿ ಕಳೆದ ಬಾರಿಗಿಂತ ಮೂರರಷ್ಟು ಏರಿಕೆ ಮಾಡಿದ್ದು ಸರ್ಕಾರ ಮತ್ತು ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಸೆಗೆ ಕೊಳ್ಳಿ ಹಿಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕೊರೋನ ಸಂಕಷ್ಟದ ಆರ್ಥಿಕ ಬಿಕ್ಕಟ್ಟಿನಲ್ಲಿ ಇರುವ ಸಂದರ್ಭದಲ್ಲಿಯೇ ರೈತರ ಮಕ್ಕಳು ಇಷ್ಟು ಹಣ ಕಟ್ಟಲು ತುಂಬಾ ಕಷ್ಟವಾಗುತ್ತದೆ. ಕೂಡಲೇ ಸರ್ಕಾರ ಮತ್ತು ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಮಧ್ಯಪ್ರವೇಶ ಮಾಡಿ ಶುಲ್ಕವನ್ನು ಕಡಿಮೆ ಮಾಡಬೇಕು. ವಿಶ್ವವಿದ್ಯಾಲಯವು ಕಡಿಮೆ ಮಾಡದೇ ಹೋದರೆ ಎಸ್‌ಎಫ್‌ಐ ಸಂಘಟನೆ ವತಿಯಿಂದ ವಿಶ್ವವಿದ್ಯಾಲಯದ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷೆ ಅಂಕಿತ, ಮುಖಂಡರಾದ ರಾಜೇಶ್, ಚೈತ್ರ, ಭರತ್, ಅನುಷಾ, ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

8 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

23 hours ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

23 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

2 days ago