Categories: ಕೋಲಾರ

ಸ್ನಾತಕೋತ್ತರ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಎಸ್ಎಫ್ಐ ನಿಂದ ಪ್ರತಿಭಟನೆ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ವಿಧ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ಎಫ್ಐ ಸಂಘಟನೆ ಹಾಗೂ ವಿಧ್ಯಾರ್ಥಿಗಳು ಮಂಗಸಂದ್ರ ಸ್ನಾತಕೋತ್ತರ ಕೇಂದ್ರದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು

ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಎನ್ ಶಿವಪ್ಪ ಮಾತನಾಡಿ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ಮೌಲ್ಯಮಾಪನ, ಇಂಟರ್‌ನೆಟ್ ಸಮಸ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡ ವಿಧ್ಯಾರ್ಥಿಗಳಿಗೆ ಹೆಚ್ಚಿನ ಶುಲ್ಕ ಪಾವತಿ ಸೇರಿದಂತೆ ಸಾಕಷ್ಟು ಸಮಸ್ಯೆಗಳ ಪಟ್ಟಿಯನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸಮಸ್ಯೆ ಬಗೆಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ದಾಖಲಾತಿ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನ ಬಂದಿಲ್ಲ ಹಿಂದುಳಿದ ವರ್ಗಗಳ ಬುಡಕಟ್ಟು ಭೇಟಿಯ ಹಣವನ್ನು ನೀಡದೇ ವಿಳಂಬ ಮಾಡಿದ್ದಾರೆ ವಿದ್ಯಾರ್ಥಿಗಳ ಸ್ವಂತ ಹಣದಿಂದ ಖರ್ಚು ಮಾಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಕ್ಕೆ ಬಿಲ್ಲುಗಳನ್ನು ನೀಡಿ ವರ್ಷವಾದರೂ ಯಾವುದೇ ಕ್ರಮ ವಹಿಸಿಲ್ಲ ಕೇಂದ್ರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ಗಳನ್ನು ವಿತರಣೆ ಮಾಡಬೇಕು ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಪ್ರತ್ಯೇಕವಾಗಿ ಪ್ರಯೋಗಾಲಯದ ಶುಲ್ಕವನ್ನು ವಸೂಲಿ ಮಾಡಬಾರದು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಮಾಜಿ ರಾಜ್ಯ ಅಧ್ಯಕ್ಷ ವಿ.ಅಂಬರೀಷ್ ಮಾತನಾಡಿ ವಿಶ್ವವಿದ್ಯಾಲಯವು ಕೆಲವು ಬ್ರೋಕರ್ ಗಳಿಂದ ಕೂಡಿದ್ದು ಶೈಕ್ಷಣಿಕ ವ್ಯವಸ್ಥೆಯನ್ನು ನಾಶ ಮಾಡಿದ್ದಾರೆ ಇದಕ್ಕೆ ಜನಪ್ರತಿನಿಧಿಗಳ ಅಧಿಕಾರಿ ವರ್ಗ ಶಾಮೀಲಾಗಿದ್ದಾರೆ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಬೆಳವಣಿಗೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡದೇ ಶಿಕ್ಷಣದಿಂದ ವಂಚಿತರಾಗಿ ಮಾಡಿದ್ದಾರೆ ಎಂದು ಆರೋಪಿಸಿದರು

ಪ್ರತಿಭಟನೆಯ ನೇತೃತ್ವವನ್ನು ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ವಿ.ಸುರೇಶ್‌ಬಾಬು ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾ‌ರ್, ಸುದರ್ಶನ್, ಲಾವಣ್ಯ, ಜಿಲ್ಲಾ ಸಹ ಕಾರ್ಯದರ್ಶಿ ಹರ್ಷಿತ ಮುಖಂಡರಾದ ತಿಮ್ಮರಾಜು, ಅಮೃತ, ಬಾಷ, ಪವಣ್, ಪ್ರಿಯಾಂಕ ಸೇರಿದಂತೆ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ವಹಿಸಿದ್ದರು

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

57 minutes ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

4 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

5 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

7 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

8 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

8 hours ago