ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ವಿಧ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ಎಫ್ಐ ಸಂಘಟನೆ ಹಾಗೂ ವಿಧ್ಯಾರ್ಥಿಗಳು ಮಂಗಸಂದ್ರ ಸ್ನಾತಕೋತ್ತರ ಕೇಂದ್ರದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು
ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಎನ್ ಶಿವಪ್ಪ ಮಾತನಾಡಿ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ಮೌಲ್ಯಮಾಪನ, ಇಂಟರ್‌ನೆಟ್ ಸಮಸ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡ ವಿಧ್ಯಾರ್ಥಿಗಳಿಗೆ ಹೆಚ್ಚಿನ ಶುಲ್ಕ ಪಾವತಿ ಸೇರಿದಂತೆ ಸಾಕಷ್ಟು ಸಮಸ್ಯೆಗಳ ಪಟ್ಟಿಯನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸಮಸ್ಯೆ ಬಗೆಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು
ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ದಾಖಲಾತಿ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನ ಬಂದಿಲ್ಲ ಹಿಂದುಳಿದ ವರ್ಗಗಳ ಬುಡಕಟ್ಟು ಭೇಟಿಯ ಹಣವನ್ನು ನೀಡದೇ ವಿಳಂಬ ಮಾಡಿದ್ದಾರೆ ವಿದ್ಯಾರ್ಥಿಗಳ ಸ್ವಂತ ಹಣದಿಂದ ಖರ್ಚು ಮಾಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಕ್ಕೆ ಬಿಲ್ಲುಗಳನ್ನು ನೀಡಿ ವರ್ಷವಾದರೂ ಯಾವುದೇ ಕ್ರಮ ವಹಿಸಿಲ್ಲ ಕೇಂದ್ರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ಗಳನ್ನು ವಿತರಣೆ ಮಾಡಬೇಕು ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಪ್ರತ್ಯೇಕವಾಗಿ ಪ್ರಯೋಗಾಲಯದ ಶುಲ್ಕವನ್ನು ವಸೂಲಿ ಮಾಡಬಾರದು ಎಂದು ಒತ್ತಾಯಿಸಿದರು
ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಮಾಜಿ ರಾಜ್ಯ ಅಧ್ಯಕ್ಷ ವಿ.ಅಂಬರೀಷ್ ಮಾತನಾಡಿ ವಿಶ್ವವಿದ್ಯಾಲಯವು ಕೆಲವು ಬ್ರೋಕರ್ ಗಳಿಂದ ಕೂಡಿದ್ದು ಶೈಕ್ಷಣಿಕ ವ್ಯವಸ್ಥೆಯನ್ನು ನಾಶ ಮಾಡಿದ್ದಾರೆ ಇದಕ್ಕೆ ಜನಪ್ರತಿನಿಧಿಗಳ ಅಧಿಕಾರಿ ವರ್ಗ ಶಾಮೀಲಾಗಿದ್ದಾರೆ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಬೆಳವಣಿಗೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡದೇ ಶಿಕ್ಷಣದಿಂದ ವಂಚಿತರಾಗಿ ಮಾಡಿದ್ದಾರೆ ಎಂದು ಆರೋಪಿಸಿದರು
ಪ್ರತಿಭಟನೆಯ ನೇತೃತ್ವವನ್ನು ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ವಿ.ಸುರೇಶ್‌ಬಾಬು ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾರ್, ಸುದರ್ಶನ್, ಲಾವಣ್ಯ, ಜಿಲ್ಲಾ ಸಹ ಕಾರ್ಯದರ್ಶಿ ಹರ್ಷಿತ ಮುಖಂಡರಾದ ತಿಮ್ಮರಾಜು, ಅಮೃತ, ಬಾಷ, ಪವಣ್, ಪ್ರಿಯಾಂಕ ಸೇರಿದಂತೆ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ವಹಿಸಿದ್ದರು
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…