Categories: ಕೋಲಾರ

ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕ ಪಟ್ಟಿ ವಿತರಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಒತ್ತಾಯ

ಇಂದು ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಶ್ರೀನಿವಾಸಪುರ ತಾಲ್ಲೂಕು ಸಮಿತಿ ವತಿಯಿಂದ 2020ರಲ್ಲಿ NEP ಜಾರಿಯಾದ ನಂತರ ಇಲ್ಲಿಯವರೆಗೂ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕ ಪಟ್ಟಿಗಳನ್ನು ವಿತರಿಸಿರುವುದಿಲ್ಲ. ಕೂಡಲೇ ಅಂಕ ಪಟ್ಟಿಗಳನ್ನು ವಿತರಿಸುವಂತೆ ಒತ್ತಾಯಿಸಿ ಶ್ರೀನಿವಾಸಪುರ

ತಾಲ್ಲೂಕು ದಂಡಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿಯಾದ ಸುರೇಶ್ ಬಾಬು ಮಾತಾಡಿ,
ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್.ಎಫ್.ಐ) ಜಿಲ್ಲಾ ಸಮಿತಿ ಈ ಮೂಲಕ ತಮ್ಮಲ್ಲಿ ಒತ್ತಾಯಿಸುವುದೇನಂದರೆ ,
ರಾಜ್ಯದಲ್ಲಿ NEP 2020 ಜಾರಿಯಾದ ನಂತರ ಸುಮಾರು 22 ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು ಸುಮಾರು 51 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಂಕಪಟ್ಟಿ ವಿತರಣೆ ಮಾಡಿರುವುದಿಲ್ಲ. ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯದಲ್ಲಿ NEP ರದ್ದುಗೊಳಿಸಿ SEP ಜಾರಿಗೋಳಿಸಿದೆ. ಆದರೆ, SEP ವಿದ್ಯಾರ್ಥಿಗಳಿಗೂ ಸಹ ಅಂಕಪಟ್ಟಿ ಸಿಗುತ್ತಿಲ್ಲ. ಉನ್ನತ ವಿದ್ಯಾಭ್ಯಾಸಕ್ಕೆ ಅಂಕ ಪಟ್ಟಿ ಬೇಕಾಗಿರುವ ಕಾರಣ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳ ಹತ್ತಿರ ಹೋಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ವಿಶ್ವವಿದ್ಯಾನಿಲಯದ ಬಳಿ ವಿದ್ಯಾರ್ಥಿಗಳು ಅಂಕಪಟ್ಟಿ ಕೇಳಿಕೊಂಡು ಹೋದರೆ ಡಿಜಿ ಲಾಕರ್ ( Digi Locker ) ನಲ್ಲಿ ಅಂಕಪಟ್ಟಿ ತೆಗೆದುಕೊಳ್ಳಿ ಎಂದು ತಿಳಿಸುತ್ತಿದ್ದಾರೆ‌. ಆದರೆ, ಡಿಜಿಲಾಕರ್ ನಲ್ಲಿಯೂ ಸಹ ಅಂಕಪಟ್ಟಿ ಸಿಗುತ್ತಿಲ್ಲ. ವಿದ್ಯಾರ್ಥಿಗಳು ಕೇಳಿದರೆ ತಾಂತ್ರಿಕ ಸಮಸ್ಯೆ ಇದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸುತ್ತಾರೆ. ಈ ಸಮಸ್ಯೆ UCCMS ಜಾರಿಗೆ ಬಂದ ದಿನದಿಂದ ಇದೆ ಸಮಸ್ಯೆ ಉಂಟಾಗುತ್ತಿದೆ ಇದರಿಂದ ಉನ್ನತ ವಿದ್ಯಾಭ್ಯಾಸಕ್ಕೆ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಸ್ಯೆ ಉಂಟಾಗುತ್ತಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತು ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಸಹ ತೊಂದರೆ ಉಂಟಾಗುತ್ತಿದೆ ಎಂದರು.

ನಂತರ ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷರಾದ ಉದಯ್ ಕುಮಾರ್ ಮಾತಾಡಿ. NEP ಯಲ್ಲಿ ಆನ್ಲೈನ್ ಅಂಕಪಟ್ಟಿ ಜೊತೆಗೆ ಮುದ್ರಿತಾ ಅಂಕಪಟ್ಟಿ ನೀಡಬೇಕೆಂದು ಇದೆ. ಅದಲ್ಲದೆ ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು 22-12-2022 ರಂದು ಎಲ್ಲಾ ವಿಶ್ವವಿದ್ಯಾನಿಲಯಗಳು ಮುದ್ರಿತಾ ಅಂಕಪಟ್ಟಿ ವಿತರಿಸಬೇಕೆಂದು ಆದೇಶ ನೀಡಿದ್ದರು ಸಹ ವಿಶ್ವವಿದ್ಯಾನಿಲಯಗಳು ಪಾಲಿಸುತ್ತಿಲ್ಲ. ಆದರಿಂದ, ತಕ್ಷಣ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಅಂಕಪಟ್ಟಿ ವಿತರಣೆ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಈ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡುತ್ತೇವೆ. ಜೊತೆಗೆ ಅಂಕಪಟ್ಟಿ ವಿತರಣೆಯಲ್ಲಿ ಸುಮಾರು 200 ಕೋಟಿ ಹಣ ದುರ್ಬಳಕೆ ಆಗಿರುವುದು ಮೇಲ್ನೋಟಕ್ಕೆ ಕಾಣುತ್ತದೆ. ಆದರಿಂದ ಅಂಕ ಪಟ್ಟಿ ವಿತರಣೆಗೆ ಸಂಬಂದಿಸಿದಂತೆ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ( SFI) ಒತ್ತಾಯ ಮಾಡುತ್ತದೆ ಎಂದರು.

ಹಾಕ್ಕೋತ್ತಾಯ

1) 51 ಲಕ್ಷ ವಿದ್ಯಾರ್ಥಿಗಳಿಗೆ ತಕ್ಷಣ ಮುದ್ರಿತಾ ಅಂಕಪಟ್ಟಿ ವಿತರಿಸಬೇಕು.
2) ಯು ಸಿ ಸಿ ಎಂ ಎಸ್ ( UCCMS) ರದ್ದುಗೊಳಿಸಬೇಕು.
3) ಅಂಕಪಟ್ಟಿ ವಿತರಣೆಯಲ್ಲಿ ಹಣ ದುರ್ಬಳಕೆ ಆಗಿದೆ ಆದರಿಂದ ಉನ್ನತ ಮಟ್ಟದ ತನಿಖೆಯಾಗಬೇಕು.
4) ನಿಗದಿತ ಸಮಯದಲ್ಲಿ ಫಲಿತಾಂಶ ಕೊಡಬೇಕು.
5) ಪದವಿ ಮುಗಿಸಿ ಮುಂದಿನ ಬಿ ಎಡ್ ವಿದ್ಯಾಭ್ಯಾಸ ಕ್ಕೆ ಅಂಕಪಟ್ಟಿ ಮೇಲೆ ಕುಲ ಸಚಿವರ ಸಹಿ ಮತ್ತು ಮೊಹರು ಅವಶ್ಯ ಅದಕ್ಕೆ ವಿಜಾಪುರ ವಿವಿ ಅವರು ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಪಂದನೆ ಮಾಡವುದಿಲ್ಲ. ಬೆಳೆಗ್ಗೆ ರಾತ್ರಿ ವರೆಗೂ ಕಾಯುವ ಸ್ಥಿತಿ ಇದೆ. ಕೊಡಲೇ ವಿದ್ಯಾರ್ಥಿಗಳಿಗೆ ಸಹಿ ಕಲಳಿಸಬೇಕು.

ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲ್ಲೂಕು ಕಾರ್ಯದರ್ಶಿ ಶ್ರೀಹರಿ, ತಾಲ್ಲೂಕು ಸಹ ಕಾರ್ಯದರ್ಶಿ ನವೀನ್,
ರಾಜು, ಪ್ರವೀಣ್, ಗಗನ ಶ್ರೀ, ಪುನೀತ್, ಅಧಿಕೇಶವ, ಭಾರ್ಗವ್, ಅರ್ಚನಾ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

9 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

10 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

16 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago