Categories: ಮೈಸೂರು

ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕಪಟ್ಟಿ ವಿತರಿಸುವಂತೆ ಒತ್ತಾಯಿಸಿ ಎಸ್ ಎಫ್ ಐ ಮನವಿ

ಇಂದು ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಮೈಸೂರು ತಾಲ್ಲೂಕು ಸಮಿತಿ ವತಿಯಿಂದ 2020ರಲ್ಲಿ NEP ಜಾರಿಯಾದ ನಂತರ ಇಲ್ಲಿಯವರೆಗೂ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕ ಪಟ್ಟಿಗಳನ್ನು ವಿತರಿಸಿರುವುದಿಲ್ಲ. ಕೂಡಲೇ ಅಂಕ ಪಟ್ಟಿಗಳನ್ನು ವಿತರಿಸುವಂತೆ ಒತ್ತಾಯಿಸಿ ಮೈಸೂರು ಉಪವಿಭಾಗಾಧಿಕಾರಿ ಡಾ.ರಕ್ಷಿತ್ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮತ್ತು ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿಯಾದ ಸುರೇಶ್ ಬಾಬು ಮಾತಾಡಿ,
ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್.ಎಫ್.ಐ) ಜಿಲ್ಲಾ ಸಮಿತಿ ಈ ಮೂಲಕ ತಮ್ಮಲ್ಲಿ ಒತ್ತಾಯಿಸುವುದೇನಂದರೆ ,
ರಾಜ್ಯದಲ್ಲಿ NEP 2020 ಜಾರಿಯಾದ ನಂತರ ಸುಮಾರು 22 ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು ಸುಮಾರು 51 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಂಕಪಟ್ಟಿ ವಿತರಣೆ ಮಾಡಿರುವುದಿಲ್ಲ. ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯದಲ್ಲಿ NEP ರದ್ದುಗೊಳಿಸಿ SEP ಜಾರಿಗೋಳಿಸಿದೆ. ಆದರೆ, SEP ವಿದ್ಯಾರ್ಥಿಗಳಿಗೂ ಸಹ ಅಂಕಪಟ್ಟಿ ಸಿಗುತ್ತಿಲ್ಲ. ಉನ್ನತ ವಿದ್ಯಾಭ್ಯಾಸಕ್ಕೆ ಅಂಕ ಪಟ್ಟಿ ಬೇಕಾಗಿರುವ ಕಾರಣ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳ ಹತ್ತಿರ ಹೋಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ವಿಶ್ವವಿದ್ಯಾನಿಲಯದ ಬಳಿ ವಿದ್ಯಾರ್ಥಿಗಳು ಅಂಕಪಟ್ಟಿ ಕೇಳಿಕೊಂಡು ಹೋದರೆ ಡಿಜಿ ಲಾಕರ್ ( Digi Locker ) ನಲ್ಲಿ ಅಂಕಪಟ್ಟಿ ತೆಗೆದುಕೊಳ್ಳಿ ಎಂದು ತಿಳಿಸುತ್ತಿದ್ದಾರೆ‌. ಆದರೆ, ಡಿಜಿಲಾಕರ್ ನಲ್ಲಿಯೂ ಸಹ ಅಂಕಪಟ್ಟಿ ಸಿಗುತ್ತಿಲ್ಲ. ವಿದ್ಯಾರ್ಥಿಗಳು ಕೇಳಿದರೆ ತಾಂತ್ರಿಕ ಸಮಸ್ಯೆ ಇದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸುತ್ತಾರೆ. ಈ ಸಮಸ್ಯೆ UCCMS ಜಾರಿಗೆ ಬಂದ ದಿನದಿಂದ ಇದೆ ಸಮಸ್ಯೆ ಉಂಟಾಗುತ್ತಿದೆ ಇದರಿಂದ ಉನ್ನತ ವಿದ್ಯಾಭ್ಯಾಸಕ್ಕೆ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಸ್ಯೆ ಉಂಟಾಗುತ್ತಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತು ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಸಹ ತೊಂದರೆ ಉಂಟಾಗುತ್ತಿದೆ ಎಂದರು.

ನಂತರ ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷರಾದ ಉದಯ್ ಕುಮಾರ್ ಮಾತಾಡಿ. NEP ಯಲ್ಲಿ ಆನ್ಲೈನ್ ಅಂಕಪಟ್ಟಿ ಜೊತೆಗೆ ಮುದ್ರಿತಾ ಅಂಕಪಟ್ಟಿ ನೀಡಬೇಕೆಂದು ಇದೆ. ಅದಲ್ಲದೆ ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು 22-12-2022 ರಂದು ಎಲ್ಲಾ ವಿಶ್ವವಿದ್ಯಾನಿಲಯಗಳು ಮುದ್ರಿತಾ ಅಂಕಪಟ್ಟಿ ವಿತರಿಸಬೇಕೆಂದು ಆದೇಶ ನೀಡಿದ್ದರು ಸಹ ವಿಶ್ವವಿದ್ಯಾನಿಲಯಗಳು ಪಾಲಿಸುತ್ತಿಲ್ಲ. ಆದರಿಂದ, ತಕ್ಷಣ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಅಂಕಪಟ್ಟಿ ವಿತರಣೆ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಈ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡುತ್ತೇವೆ. ಜೊತೆಗೆ ಅಂಕಪಟ್ಟಿ ವಿತರಣೆಯಲ್ಲಿ ಸುಮಾರು 200 ಕೋಟಿ ಹಣ ದುರ್ಬಳಕೆ ಆಗಿರುವುದು ಮೇಲ್ನೋಟಕ್ಕೆ ಕಾಣುತ್ತದೆ. ಆದರಿಂದ ಅಂಕ ಪಟ್ಟಿ ವಿತರಣೆಗೆ ಸಂಬಂದಿಸಿದಂತೆ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ( SFI) ಒತ್ತಾಯ ಮಾಡುತ್ತದೆ ಎಂದರು.

ಹಾಕ್ಕೋತ್ತಾಯ

1) 51 ಲಕ್ಷ ವಿದ್ಯಾರ್ಥಿಗಳಿಗೆ ತಕ್ಷಣ ಮುದ್ರಿತಾ ಅಂಕಪಟ್ಟಿ ವಿತರಿಸಬೇಕು.
2) ಯು ಸಿ ಸಿ ಎಂ ಎಸ್ ( UCCMS) ರದ್ದುಗೊಳಿಸಬೇಕು.
3) ಅಂಕಪಟ್ಟಿ ವಿತರಣೆಯಲ್ಲಿ ಹಣ ದುರ್ಬಳಕೆ ಆಗಿದೆ ಆದರಿಂದ ಉನ್ನತ ಮಟ್ಟದ ತನಿಖೆಯಾಗಬೇಕು.
4) ನಿಗದಿತ ಸಮಯದಲ್ಲಿ ಫಲಿತಾಂಶ ಕೊಡಬೇಕು.
5) ಪದವಿ ಮುಗಿಸಿ ಮುಂದಿನ ಬಿ ಎಡ್ ವಿದ್ಯಾಭ್ಯಾಸ ಕ್ಕೆ ಅಂಕಪಟ್ಟಿ ಮೇಲೆ ಕುಲ ಸಚಿವರ ಸಹಿ ಮತ್ತು ಮೊಹರು ಅವಶ್ಯ ಅದಕ್ಕೆ ವಿಜಾಪುರ ವಿವಿ ಅವರು ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಪಂದನೆ ಮಾಡವುದಿಲ್ಲ. ಬೆಳೆಗ್ಗೆ ರಾತ್ರಿ ವರೆಗೂ ಕಾಯುವ ಸ್ಥಿತಿ ಇದೆ. ಕೊಡಲೇ ವಿದ್ಯಾರ್ಥಿಗಳಿಗೆ ಸಹಿ ಕಲಳಿಸಬೇಕು.

ಈ ವೇಳೆ ಮೈಸೂರು ತಾಲೂಕು ಸಮಿತಿ ಅಧ್ಯಕ್ಷ ಅಭಿ.ಡಿ, ಕಾರ್ಯದರ್ಶಿ ವಿನಾಯಕ್, ಮೈಸೂರು ವಿಶ್ವವಿದ್ಯಾನಿಲಯ ಘಟಕ ಸಮಿತಿ ಅಧ್ಯಕ್ಷ ಚಿರಾಗ್ ಎಸ್.ಕೆ ಮೂರ್ತಿ, ಜಿಲ್ಲಾಕಾರ್ಯದರ್ಶಿ ಪ್ರಜ್ವಲ್ ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

2 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

2 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

17 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

22 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

22 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago