ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚರಮಂಗನಹಳ್ಳಿ ಗ್ರಾಮದ ಅಭಿಲಾಷ್ (20) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಮೇ 17ರಂದು ಸ್ನೇಹಿತರ ಗುಂಪೊಂದು ಬರ್ತಡೇ ಆಚರಣೆಗೆಂದು ಕೋಲಾರದಿಂದ ದೊಡ್ಡಬಳ್ಳಾಪುರ ತಾಲೂಕಿನ ಖಾಸಗಿ ರೆಸಾರ್ಟ್‌ಗೆ ಬಂದಿತ್ತು. ಮೇ 18ರ ಮಧ್ಯರಾತ್ರಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಬಳಿಕ ಎಲ್ಲರೂ ಕೊಠಡಿಗಳಲ್ಲಿ ಮಲಗಿದ್ದರು.

ಈ ವೇಳೆ ಅಭಿಲಾಷ್ ಹೊರಗೆ ಹೋಗಿ ಬರುತ್ತೇನೆ ಎಂದು ಹೇಳಿ ಕೊಠಡಿಯಿಂದ ಹೊರಹೋಗಿದ್ದಾನೆ. ಆದರೆ ಬಹಳ ಸಮಯವಾದರೂ ಮರಳಿ ಬಾರದ ಹಿನ್ನೆಲೆಯಲ್ಲಿ ಸ್ನೇಹಿತರು ರೆಸಾರ್ಟ್ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಕತ್ತಲಿರುವುದರಿಂದ ಯುವಕ ಪತ್ತೆಯಾಗಿರಲಿಲ್ಲ. ನಂತರ ರೆಸಾರ್ಟ್ ಮಾಲೀಕರಿಗೂ ಮಾಹಿತಿ ನೀಡಿದ್ದಾರೆ.

ಬೆಳಿಗ್ಗೆ ರೆಸಾರ್ಟ್ ಸಿಬ್ಬಂದಿ ಈಜುಕೊಳದಲ್ಲಿ ಯುವಕನ ಶವ ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹೊಸಹಳ್ಳಿ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ನಿದ್ದೆಗಣ್ಣಿನಲ್ಲಿ ತೆರಳಿದ್ದ ಅಭಿಲಾಷ್ ಆಕಸ್ಮಿಕವಾಗಿ ಈಜುಕೊಳಕ್ಕೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

3 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

15 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

21 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

22 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago