ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ನಂದಿ ಬೆಟ್ಟದ ಅಂಕುಡೊಂಕಿನ ರಸ್ತೆಯ 15ನೇ ತಿರುವಿನಲ್ಲಿ ಅಪಘಾತವಾಗಿದೆ. ಅಪಘಾತದಲ್ಲಿ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದ ನಿವಾಸಿ ಶ್ರೀಕಾಂತ್(21) ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಕಣಿತಹಳ್ಳಿ ಗ್ರಾಮದ ನಿವಾಸಿ ಅರವಿಂದ್(21) ಸಾವನ್ನಪ್ಪಿರುವ ದುರ್ದೈವಿಗಳು.
ಅರವಿಂದ್ ಹಾಗೂ ಶ್ರೀಕಾಂತ್ ಸಂಬಂಧಿಕರು. ನಂದಿ ಬೆಟ್ಟಕ್ಕೆ ತೆರಳಿ ವಾಪಸ್ ಆಗುವಾಗ ಅಪಘಾತವಾಗಿದೆ.
ನಂದಿ ಬೆಟ್ಟದಿಂದ ಕೆಳಗೆ ಇಳಿಯುವಾಗ ನಿಯಂತ್ರಣ ತಪ್ಪಿ ಬಂಡೆಗೆ ಬೈಕ್ ಡಿಕ್ಕಿ ಹಿಡೆದಿದೆ. ನಂದಿ ಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.