ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ ಶ್ರಮಿಸಬೇಕು ಎಂದು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಹೇಳಿದರು.

ತಾಲೂಕಿನ ಮೆಳೆಕೋಟೆಯ ರಾಜೀವಗಾಂಧಿ ಸಮುದಾಯ ಭವನದಲ್ಲಿ ಶ್ರೀರಾಮಸುಬ್ಬಯ್ಯ ಸ್ಮಾರಕ ಪ್ರೌಢಶಾಲೆಯ 2002-03ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಕಾಲಕ್ಕೆ ತಕ್ಕಂತೆ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಅವುಗಳಿಗೆ ನಾವೆಲ್ಲರೂ ಹೊಂದಿಕೊಳ್ಳಬೇಕಿದೆ. ಕೇವಲ ಅಂಕ ಗಳಿಸುವುದಷ್ಟೇ ಶಿಕ್ಷಣದ ಉದ್ದೇಶವಾಗಬಾರದು. ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು, ಮಾನವೀಯತೆ, ಸೃಜನಶೀಲತೆ ಹಾಗೂ ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸುವುದು ಮುಖ್ಯವಾಗಿದೆ ಎಂದರು.

ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಆಶಯದಿಂದ ತಮ್ಮ ವೃತ್ತಿ ಜೀವನದಲ್ಲಿ ಸಾಧ್ಯವಾದಷ್ಟು ಪ್ರಯತ್ನ ಮಾಡಿದ್ದೇನೆ. ಮಕ್ಕಳಿಗೆ ನೀಡಿದ ಶಿಸ್ತು ಹಾಗೂ ಮಾರ್ಗದರ್ಶನದ ಹಿಂದೆ ಅವರು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬ ಉದ್ದೇಶವಿತ್ತು. ಶಿಕ್ಷಕರ ಜವಾಬ್ದಾರಿ ತರಗತಿಗೆ ಸೀಮಿತವಾಗದೆ, ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿಯೂ ಮಹತ್ವದ್ದಾಗಿದೆ ಎಂದು ಹೇಳಿದರು.

ಕಾರವಾರ ನನ್ನ ಜನ್ಮಭೂಮಿಯಾದರೂ ಮೆಳೆಕೋಟೆ ನನ್ನ ಕರ್ಮಭೂಮಿಯಾಗಿದೆ. ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಈ ಊರು ಹಾಗೂ ಇಲ್ಲಿನ ಜನರು ನೀಡಿದ ಪ್ರೀತಿ, ಸಹಕಾರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇಂದು ಹಳೆಯ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ನೀಡುತ್ತಿರುವ ಗೌರವ ನನ್ನ ಶಿಕ್ಷಕ ಜೀವನದ ಅವಿಸ್ಮರಣೀಯ ಕ್ಷಣವಾಗಿದೆ ಎಂದು ಭಾವುಕರಾದರು.

ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಜತೆಗೆ, ಮೊಬೈಲ್ ಹಾಗೂ ತಂತ್ರಜ್ಞಾನದ ಬಳಕೆಯಲ್ಲೂ ಪೋಷಕರು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಓದಿನೊಂದಿಗೆ ಕ್ರೀಡೆ, ಕಲೆ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸುವ ವಾತಾವರಣವನ್ನು ಕಲ್ಪಿಸಬೇಕು ಎಂದು ಸಲಹೆ ನೀಡಿದರು.

ಹಳೇ ವಿದ್ಯಾರ್ಥಿ ಗಂಟಿಗಾನಹಳ್ಳಿ ಸಂದೀಪ್ ಮಾತನಾಡಿ, ಅಂದಿನ ಶಿಕ್ಷಣ ವ್ಯವಸ್ಥೆ ಬೇರೆಯೇ ಆಗಿತ್ತು. ಇಂದಿನ ಶಿಕ್ಷಣ ಸಂಪೂರ್ಣ ಬದಲಾಗಿದೆ. ಮಕ್ಕಳಿಗೆ ಸಾಮಾನ್ಯ ಜ್ಞಾನ, ಸಂಸ್ಕಾರದ ಜೊತೆಗೆ ಶಿಕ್ಷಣ ಕಲಿಸುವ ಅಗತ್ಯತೆ ತೀವ್ರವಾಗಿದೆ. ಹಿಂದೆ ಶಿಕ್ಷಕರೆಂದರೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಗುರುವಿಗೆ ವಿಧಯನಾಗಿರುತ್ತಿದ್ದ ಇಂದು ಅಂತಹ ವಾತಾವರಣವಿಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಅಗತ್ಯವಿದೆ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ನಿಟ್ಟಿನಲ್ಲಿ ಸಸಿಗಳನ್ನು ನೆಟ್ಟು ಚಾಲನೆ ನೀಡಲಾಯಿತು. ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರೊಂದಿಗಿನ ನೆನಪುಗಳನ್ನು ಹಂಚಿಕೊಂಡು, ಅವರ ಸೇವೆ ಹಾಗೂ ಮಾರ್ಗದರ್ಶನಕ್ಕೆ ಕೃತಜ್ಞತೆ ಸಲ್ಲಿಸಿದರು.

ಈ ವೇಳೆ ನಿವೃತ್ತ ಶಿಕ್ಷಕರಾದ ಯೋಗ ನರಸಿಂಹಮೂರ್ತಿ, ಆಶಾ, ಸುಜಾತಾ, ಕುಮಾರಸ್ವಾಮಿ, ಶರಣಪ್ಪ, ಸೇರಿದಂತೆ ಹಳೆಯ ವಿದ್ಯಾರ್ಥಿಗಳಾದ ಅಶೋಕ್, ಅಶ್ವಥ್, ಸಿಂಧು ಸೇರಿದಂತೆ ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಪ್ಪು5ನೇ ಪುಣ್ಯಸ್ಮರಣೆ: ಅಭಿಮಾನಿಗಳಿಂದ ಬಿರಿಯಾನಿ ವಿತರಣೆ: ನೆಚ್ಚಿನ ನಾಯಕನನ್ನು ನೆನೆದು ಭಾವುಕರಾದ ಅಭಿಮಾನಿಗಳು

ದೊಡ್ಡಬಳ್ಳಾಪುರ: ಕರ್ನಾಟಕ ರತ್ನ, ದಿವಂಗತ ಡಾ. ಪುನೀತ್ ರಾಜಕುಮಾರ್ ಅವರ ಐದನೇ ವರ್ಷದ ಪುಣ್ಯಸ್ಮರಣೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಎಳ್ಳುಪುರ ಗ್ರಾಮದಲ್ಲಿ…

3 hours ago

ಪೌರ ಕಾರ್ಮಿಕನಿಗೆ ಮಹಿಳೆಯಿಂದ ನಿಂದನೆ ಆರೋಪ: ಮನೆ ಮುಂದೆ ಕಸ ಸುರಿದು ಆಕ್ರೋಶ

ನೆಲಮಂಗಲ: ನಗರದ ವೀವರ್ಸ್ ಕಾಲೋನಿಯ ಮಾರುತಿ ನಗರದಲ್ಲಿ ಕಸ ತೆರವು ವಿಚಾರವಾಗಿ ಮಹಿಳೆ ಮತ್ತು ಪೌರ ಕಾರ್ಮಿಕನ ನಡುವೆ ವಾಗ್ವಾದ…

9 hours ago

ಜಿಲ್ಲೆಯಲ್ಲಿ 8,04,534 ಮತದಾರರು: 3814 ಮತದಾರರ ಹೆಸರು ಡಿಲಿಟ್

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಅಂತಿಮ ಮತದಾರರ ಪಟ್ಟಿಯುಲ್ಲಿ 8,04,534 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್…

1 day ago

ಅತಿಯಾದ ಆತ್ಮವಿಶ್ವಾಸದಿಂದ ಕಾಂಗ್ರೆಸ್‌ಗೆ ಹಿನ್ನಡೆ: ಸಚಿವ ಚಲುವರಾಯಸ್ವಾಮಿ

ವಿಧಾನ ಪರಿಷತ್ತಿನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡಿರುವುದಕ್ಕೆ ಅತಿಯಾದ ಆತ್ಮವಿಶ್ವಾಸವೂ…

1 day ago

ಪ್ರಾಮಾಣಿಕತೆಯ ಪ್ರಾಯೋಗಿಕತೆ…….

ಪ್ರಾಮಾಣಿಕತೆ ಎಂಬುದು ಬರಹದಲ್ಲಿ - ಭಾಷಣಗಳಲ್ಲಿ ಅಥವಾ ಬೇರೆ ಯಾವುದೇ ವೇದಿಕೆಯಲ್ಲಿ ‌ಖಾಸಗಿಯಾಗಿ ಅಥವಾ ಸಾರ್ವಜನಿಕವಾಗಿ ಹೇಳುವುದು ಮತ್ತು ಅದರಂತೆ…

1 day ago

ದೇವನಹಳ್ಳಿ ಬಳಿ ಆರ್‌ಟಿಒ ಮೆಗಾ ರೇಡ್‌: 50ಕ್ಕೂ ಹೆಚ್ಚು ಬಸ್‌ಗಳಿಂದ ತೆರಿಗೆ ವಸೂಲಿ

ದೇವನಹಳ್ಳಿ: ಕರ್ನಾಟಕ ರಾಜ್ಯಕ್ಕೆ ಪಾವತಿಸಬೇಕಾದ ತೆರಿಗೆಯನ್ನು ಕಟ್ಟದೆ ಸಂಚರಿಸುತ್ತಿದ್ದ ಹೊರರಾಜ್ಯಗಳಲ್ಲಿ ನೋಂದಣಿಯಾದ ಖಾಸಗಿ ಬಸ್‌ಗಳ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು…

1 day ago