ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಏಕದಿನ ಪಂದ್ಯಗಳ ಮೊದಲ ಪಂದ್ಯದಲ್ಲಿಯೇ ಕುಲದೀಪ್ ಯಾದವ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಕೈಚಳಕದಿಂದ ಭಾರತಕ್ಕೆ 5 ವಿಕೆಟ್ ಗಳ ಜಯ ತಂದುಕೊಟ್ಟಿತು.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ಪಡೆ ವೆಸ್ಟ್ಇಂಡೀಸ್ ತಂಡವನ್ನು 114 ರನ್ ಗಳಿಗೆ ಆಲೌಟ್ ಮಾಡುವ ಮೂಲಕ ಜಯವನ್ನು ಸುಲಭವಾಗಿಸಿದರು.
ವೆಸ್ಟ್ಇಂಡೀಸ್ ಪರವಾಗಿ ನಾಯಕ ಶೈಹೋಪ್ (42) ಹಾಗೂ ಅಥೆಂಜೆ (22) ರನ್ ಗಳಿಸುವ ಮೂಲಕ ತಂಡವನ್ನು ಶತಕದ ಗಡಿ ದಾಟಿಸಿದರು, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ (4), ಅಲ್ ರೌಂಡರ್ ರವೀಂದ್ರ ಜಡೇಜಾ (3) ವಿಕೆಟ್ ಪಡೆದರೆ ಹಾರ್ದಿಕ್ ಪಾಂಡ್ಯ, ಪಾದಾರ್ಪಣೆ ಪಂದ್ಯವಾಡಿದ ಮುಖೇಶ್ ಕುಮಾರ್ ಹಾಗೂ ಶಾದು೯ಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.
ಸಾಧಾರಣ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರ ಇಶಾನ್ ಕಿಶನ್ (52) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು, ಇವರಿಗೆ ಸೂಯ೯ಕುಮಾರ್ ಯಾದವ್(19) ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ (16) ರನ್ ಗಳಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.
ಉತ್ತಮ ಬೌಲಿಂಗ್ ಪ್ರದರ್ಶಿಸಿದ ಕುಲದೀಪ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.