Categories: Home

ಸ್ಪೀಕರ್ ಪೀಠದ ಮುಂದೆ ಬಂದು ಪೀಠಕ್ಕೆ ಅಗೌರವ ಹಿನ್ನೆಲೆ: ಶಾಸಕ ಧೀರಜ್ ಮುನಿರಾಜ್ ಸೇರಿದಂತೆ 18 ಮಂದಿ ಶಾಸಕರು ಅಮಾನತು: 6 ತಿಂಗಳವರೆಗೆ ಕಲಾಪದಿಂದ ಅಮಾನತು

ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿ  ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.

ಹನಿಟ್ರ್ಯಾಪ್ ಪ್ರಕರಣ ಖಂಡಿಸಿ, ಪ್ರಕರಣದ ಸಿಬಿಐ ತನಿಖೆ ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು.

ಆಡಳಿತ ಪಕ್ಷದ ವಿರುದ್ಧ ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಸ್ಪೀಕರ್ ಪೀಠದ ಮೇಲೆ ಏರಿ ಬಂದ ಬಿಜೆಪಿ ಸದಸ್ಯರು ತಮ್ಮ ಆಕ್ರೋಶ ಹೊರಹಾಕಿದ್ದರು.

ಗದ್ದಲ ಕೋಲಾಹಲದ ನಡುವೆ ಸ್ಪೀಕರ್ ಪೀಠದ ಮೇಲೆ ಬಿಜೆಪಿ ಸದಸ್ಯರು ಕಾಗದ ಪ್ರತಿಗಳನ್ನು ಹರಿದು ಎಸೆದಿದ್ದರು. ಈ ಹಿನ್ನೆಲೆ ಪೀಠಕ್ಕೆ ಅಗೌರವ ತೋರಿದ 18 ಮಂದಿ ಬಿಜೆಪಿ ಸದಸ್ಯರನ್ನು ಸದನ ಕಲಾಪದಿಂದ 6 ತಿಂಗಳಿಗೆ ಅಮಾನತುಗೊಳಿಸಿ ಸ್ಪೀಕರ್ ರೂಲಿಂಗ್ ನೀಡಿದರು.

ಅಮಾನತು ಆದವರು…

ದೊಡ್ಡಣ್ಣ ಗೌಡ ಪಾಟೀಲ್

ಸಿ ಕೆ ರಾಮಮೂರ್ತಿ

ಅಶ್ವತ್ಥ ನಾರಾಯಣ

ಎಸ್ ಆರ್ ವಿಶ್ವನಾಥ್

ಬೈರತಿ ಬಸವರಾಜ

ಎಂ ಆರ್ ಪಾಟೀಲ್

ಚನ್ನಬಸಪ್ಪ

ಬಿ ಸುರೇಶ್ ಗೌಡ

ಉಮನಾಥ್ ಕೋಟ್ಯಾನ್

ಶರಣು ಸಲಗಾರ್

ಶೈಲೇಂದ್ರ ಬೆಲ್ದಾಳೆ

ಯಶಪಾಲ್ ಸುವರ್ಣ

ಹರೀಶ್ ಬಿಪಿ

ಡಾ. ಭರತ್ ಶೆಟ್ಟಿ

ಮುನಿರತ್ನ

ಬಸವರಾಜ ಮತ್ತಿಮೋಡ್

ಧೀರಜ್ ಮುನಿರಾಜು

ಡಾ ಚಂದ್ರು ಲಮಾಣಿ

ಸದನದ ಪಾವಿತ್ರ್ಯತೆಯನ್ನು ಕಾಪಾಡಬೇಕು. ನೀವು ಯು.ಟಿ.ಖಾದರ್ ಗೆ ಅಪಮಾನ ಮಾಡಿ, ಆದರೆ, ಸ್ಪೀಕರ್ ಪೀಠಕ್ಕೆ ಅಪಮಾನ ಮಾಡಿದರೆ ನಾವು ಸಹಿಸಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಸ್ಪೀಕರ್ ಪೀಠದ ಮೇಲೆ ಕಾಗದ ಎಸೆದಿದ್ದಾರೆ. ಇದನ್ನ ಯಾರೂ‌ ಸಹಿಸುವುದಿಲ್ಲ. ಇದು ಪೀಠಕ್ಕೆ ತೋರಿದ ಅಗೌರವ ಎಂದು ಹೇಳಿ ಅಮಾನತು ಮಾಡಿದ್ದಾರೆ.

Ramesh Babu

Journalist

Recent Posts

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

2 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

10 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

12 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

22 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

1 day ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago