ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಹಾಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಈಗಾಗಲೇ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಇದೀಗ ಏಕದಿನ ಮಾದರಿಯಲ್ಲಿ ಮಾತ್ರ ದೇಶದ ಪರವಾಗಿ ಸ್ಫೋಟಕ ಬ್ಯಾಟ್ಸ್‌ಮನ್ ಅಬ್ಬರಿಸಲಿದ್ದಾರೆ.
ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ರೋಹಿತ್, 67 ಟೆಸ್ಟ್‌ಗಳಲ್ಲಿ 40.57 ಸರಾಸರಿಯಲ್ಲಿ 4301 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳಿವೆ.
ರೋಹಿತ್ ಶರ್ಮಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, “ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಹೇಳಲು ಇಷ್ಟಪಡುತ್ತೇನೆ. ಬಿಳಿ ಬಣ್ಣದ ಜೆರ್ಸಿಯಲ್ಲಿ ನನ್ನ ದೇಶವನ್ನು ಪ್ರತಿನಿಧಿಸುವುದು ಒಂದು ದೊಡ್ಡ ಗೌರವ. ವರ್ಷಗಳಿಂದ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಒಡಿಐ ಮಾದರಿಯಲ್ಲಿ ಭಾರತವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ,” ಎಂದು ರೋಹಿತ್ ಶರ್ಮಾ ಬರೆದುಕೊಂಡಿದ್ದಾರೆ.
ರೋಹಿತ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಹೊಸ ಟೆಸ್ಟ್ ನಾಯಕ ಸಿಗುತ್ತಾರೆ ಎಂಬುದು ಸ್ಪಷ್ಟವಾಗಿದೆ. ಈ ರೇಸ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ರಿಷಭ್ ಪಂತ್ ಮುಂಚೂಣಿಯಲ್ಲಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…