ಸ್ಫೋಟಕ ಬ್ಯಾಟ್ಸ್‌ಮನ್‌ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ

ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಹಾಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಈಗಾಗಲೇ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಇದೀಗ ಏಕದಿನ ಮಾದರಿಯಲ್ಲಿ ಮಾತ್ರ ದೇಶದ ಪರವಾಗಿ ಸ್ಫೋಟಕ ಬ್ಯಾಟ್ಸ್‌ಮನ್‌ ಅಬ್ಬರಿಸಲಿದ್ದಾರೆ.

ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ರೋಹಿತ್, 67 ಟೆಸ್ಟ್‌ಗಳಲ್ಲಿ 40.57 ಸರಾಸರಿಯಲ್ಲಿ 4301 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳಿವೆ.

ರೋಹಿತ್ ಶರ್ಮಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, “ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಹೇಳಲು ಇಷ್ಟಪಡುತ್ತೇನೆ. ಬಿಳಿ ಬಣ್ಣದ ಜೆರ್ಸಿಯಲ್ಲಿ ನನ್ನ ದೇಶವನ್ನು ಪ್ರತಿನಿಧಿಸುವುದು ಒಂದು ದೊಡ್ಡ ಗೌರವ. ವರ್ಷಗಳಿಂದ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಒಡಿಐ ಮಾದರಿಯಲ್ಲಿ ಭಾರತವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ,” ಎಂದು ರೋಹಿತ್ ಶರ್ಮಾ ಬರೆದುಕೊಂಡಿದ್ದಾರೆ.

ರೋಹಿತ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಹೊಸ ಟೆಸ್ಟ್ ನಾಯಕ ಸಿಗುತ್ತಾರೆ ಎಂಬುದು ಸ್ಪಷ್ಟವಾಗಿದೆ. ಈ ರೇಸ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ರಿಷಭ್ ಪಂತ್ ಮುಂಚೂಣಿಯಲ್ಲಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

2 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

14 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

16 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

18 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

18 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

20 hours ago