ಕೋಲಾರ : ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಹೊಣೆ ಹಾಗೂ ಜವಾಬ್ದಾರಿಯಾಗಬೇಕು ಎಂದು ಬೆಳ್ಳೂರು ಗ್ರಾಪಂ ಪಿಡಿಒ ಸಂಪರಾಜ್ ತಿಳಿಸಿದರು,
ತಾಲೂಕಿನ ನರಸಾಪುರ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೋಡಿ ಕೃಷ್ಣಾಪುರ ಗ್ರಾಮದಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಮತ್ತು ಬೆಳ್ಳೂರು ಗ್ರಾಮ ಪಂಚಾಯಿತಿ ಹಮ್ಮಿಕೊಳ್ಳಲಾಗಿರುವ ಸ್ವಚ್ಛೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಾರ್ಮಿಕರು, ನಾಗರೀಕರು, ನಾವುಗಳೆಲ್ಲರು ಸೇರಿ ಸ್ವಚ್ಛತೆಯ ರೂವಾರಿಗಳಾಗಿ ತಮ್ಮ ಕುಟುಂಬ ಮತ್ತು ಸುತ್ತ ಮುತ್ತಲಿನ ಜನರಲ್ಲಿ ಪರಿಸರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.
ನಾವು ಬಳಸುವ ಪ್ಲಾಸ್ಟಿಕ್‌ನಿಂದ ಯಾವ ರೀತಿ ಹಾನಿಯಾಗುತ್ತಿದೆ ಎಂದು ಜನಸಾಮಾನ್ಯರಿಗೆ ಅರಿವು ಇಲ್ಲವಾಗಿದೆ ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಬಯಲು ಶೌಚಾಲಯ ನಿರ್ಮೂಲನೆಯನ್ನು, ಘನ ತ್ಯಾಜ್ಯಗಳ ನಿರ್ವಹಣೆ, ಮರುಬಳಕೆ, ಮತ್ತು ಸಂಸ್ಕರಣೆಯನ್ನು ಮಾಡುವ ಕೆಲಸವನ್ನು ಮಾಡಿದ್ದೇವೆ ಇಂದಿನ ಯುವ ಜನಾಂಗದವರು ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಸಲು ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಹಕಾರಿಯಾಗುತ್ತದೆ. ಇಂದು ದೇಶ ಎದುರಿಸುವ ದೊಡ್ಡ ಸಮಸ್ಯೆ ಘನತ್ಯಾಜ್ಯ ನಿರ್ವಹಣೆ. ಆದರಿಂದ ನಮ್ಮ ದೇಶವನ್ನು ಸ್ವಚ್ಛವಾಗಿಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಗ್ರಾಪಂ ಅಧ್ಯಕ್ಷೆ ಮಮತಾ ಮಂಜುನಾಥ್ ಮಾತನಾಡಿ ಒಬ್ಬ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಲು ಸ್ವಚ್ಛತೆ ಅತ್ಯಗತ್ಯ ಮೊದಲು ನಾವು, ನಂತರ ನಮ್ಮ ಕುಟುಂಬ ಸ್ವಚ್ಛವಾಗಿದ್ದರೆ ಇಡೀ ರಾಷ್ಟ್ರವನ್ನು ಸ್ವಚ್ಛವಾಗಿಡಬಹುದು. ಆ ಮೂಲಕ ನಮ್ಮ ಸರ್ಕಾರದ ಗುರಿ ಸ್ವಚ್ಛ ಭಾರತದ ಉದ್ದೇಶವನ್ನು ಸಾಧಿಸೋಣ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಟಾಟಾ ಎಲೆಕ್ಟ್ರಾನ್ಸ್ ಕಂಪನಿಯ ಸಿಬ್ಬಂದಿಗಳಾದ ನಿಹಾರಿಕಾ, ದಿವಾಕರ್, ಪರೀಕ್ಷತ್, ಬೆಳ್ಳೂರು ಗ್ರಾಪಂ ಸದಸ್ಯ ಸರೋಜಮ್ಮ ಬೈರಪ್ಪ ಪಂಚಾಯಿತಿ ಕಾರ್ಯದರ್ಶಿ ಚಂದ್ರಮೋಹನ್, ಎಸ್ ಡಿ ಎ ದೀಪಕ್ ಕುಮಾರ್, ಬಿಲ್ ಕಲೆಕ್ಟರ್ ಜ್ಯೋತಿ ಕುಮಾರ್ ಹಾಗೂ ಕಂಪನಿಯ ಸಿಬ್ಬಂದಿಗಳು ಹಾಜರಿದ್ದರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…