Categories: ಕೋಲಾರ

ಸ್ವಚ್ಚತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ- ಪಿಡಿಒ ಸಂಪರಾಜ್

ಕೋಲಾರ : ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಹೊಣೆ ಹಾಗೂ ಜವಾಬ್ದಾರಿಯಾಗಬೇಕು ಎಂದು ಬೆಳ್ಳೂರು ಗ್ರಾಪಂ ಪಿಡಿಒ ಸಂಪರಾಜ್ ತಿಳಿಸಿದರು,

ತಾಲೂಕಿನ ನರಸಾಪುರ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೋಡಿ ಕೃಷ್ಣಾಪುರ ಗ್ರಾಮದಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಮತ್ತು ಬೆಳ್ಳೂರು ಗ್ರಾಮ ಪಂಚಾಯಿತಿ ಹಮ್ಮಿಕೊಳ್ಳಲಾಗಿರುವ ಸ್ವಚ್ಛೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಾರ್ಮಿಕರು, ನಾಗರೀಕರು, ನಾವುಗಳೆಲ್ಲರು ಸೇರಿ ಸ್ವಚ್ಛತೆಯ ರೂವಾರಿಗಳಾಗಿ ತಮ್ಮ ಕುಟುಂಬ ಮತ್ತು ಸುತ್ತ ಮುತ್ತಲಿನ ಜನರಲ್ಲಿ ಪರಿಸರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.

ನಾವು ಬಳಸುವ ಪ್ಲಾಸ್ಟಿಕ್‌ನಿಂದ ಯಾವ ರೀತಿ ಹಾನಿಯಾಗುತ್ತಿದೆ ಎಂದು ಜನಸಾಮಾನ್ಯರಿಗೆ ಅರಿವು ಇಲ್ಲವಾಗಿದೆ ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಬಯಲು ಶೌಚಾಲಯ ನಿರ್ಮೂಲನೆಯನ್ನು, ಘನ ತ್ಯಾಜ್ಯಗಳ ನಿರ್ವಹಣೆ, ಮರುಬಳಕೆ, ಮತ್ತು ಸಂಸ್ಕರಣೆಯನ್ನು ಮಾಡುವ ಕೆಲಸವನ್ನು ಮಾಡಿದ್ದೇವೆ ಇಂದಿನ ಯುವ ಜನಾಂಗದವರು ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಸಲು ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಹಕಾರಿಯಾಗುತ್ತದೆ. ಇಂದು ದೇಶ ಎದುರಿಸುವ ದೊಡ್ಡ ಸಮಸ್ಯೆ ಘನತ್ಯಾಜ್ಯ ನಿರ್ವಹಣೆ. ಆದರಿಂದ ನಮ್ಮ ದೇಶವನ್ನು ಸ್ವಚ್ಛವಾಗಿಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಮಮತಾ ಮಂಜುನಾಥ್ ಮಾತನಾಡಿ ಒಬ್ಬ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಲು ಸ್ವಚ್ಛತೆ ಅತ್ಯಗತ್ಯ ಮೊದಲು ನಾವು, ನಂತರ ನಮ್ಮ ಕುಟುಂಬ ಸ್ವಚ್ಛವಾಗಿದ್ದರೆ ಇಡೀ ರಾಷ್ಟ್ರವನ್ನು ಸ್ವಚ್ಛವಾಗಿಡಬಹುದು. ಆ ಮೂಲಕ ನಮ್ಮ ಸರ್ಕಾರದ ಗುರಿ ಸ್ವಚ್ಛ ಭಾರತದ ಉದ್ದೇಶವನ್ನು ಸಾಧಿಸೋಣ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಟಾಟಾ ಎಲೆಕ್ಟ್ರಾನ್ಸ್ ಕಂಪನಿಯ ಸಿಬ್ಬಂದಿಗಳಾದ ನಿಹಾರಿಕಾ, ದಿವಾಕರ್, ಪರೀಕ್ಷತ್, ಬೆಳ್ಳೂರು ಗ್ರಾಪಂ ಸದಸ್ಯ ಸರೋಜಮ್ಮ ಬೈರಪ್ಪ ಪಂಚಾಯಿತಿ ಕಾರ್ಯದರ್ಶಿ ಚಂದ್ರಮೋಹನ್, ಎಸ್ ಡಿ ಎ ದೀಪಕ್ ಕುಮಾರ್, ಬಿಲ್ ಕಲೆಕ್ಟರ್ ಜ್ಯೋತಿ ಕುಮಾರ್ ಹಾಗೂ ಕಂಪನಿಯ ಸಿಬ್ಬಂದಿಗಳು ಹಾಜರಿದ್ದರು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

3 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

6 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

8 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

21 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

23 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago