ಸ್ವಚ್ಛತೆ ಇಲ್ಲದೆ ಗಬ್ಬೆದ್ದು ನಾರುತ್ತಿರುವ ಭೋವಿಪಾಳ್ಯದ ಚರಂಡಿಗಳು

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಪಂಚಾಯಿತಿ ವ್ಯಾಪ್ತಿಯ ಭೋವಿಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಇಲ್ಲದ ಚರಂಡಿಗಳು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿವೆ. ಸೊಳ್ಳೆಗಳ ಕಾಟದಿಂದಾಗಿ ಮಲೇರಿಯಾ ಮತ್ತಿತರ ರೋಗ ಹರಡುವ ಭೀತಿಯಲ್ಲಿ ಗ್ರಾಮಸ್ಥರಿದ್ದಾರೆ.

ಆಗಾಗ ಮಳೆಯಾಗುತ್ತಿರುವುದರಿಂದ ಚರಂಡಿಗಳಲ್ಲಿ ನೀರು ನಿಂತು ಕಸ ಕಡ್ಡಿ ಕೊಳೆತು ನಾರುತ್ತದೆ. ಚರಂಡಿ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು, ಕಳೆದ ವರ್ಷವೇ ಖುದ್ದು ಶಾಸಕ ಧೀರಜ್ ಮುನಿರಾಜ್ ಅವರೇ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರೂ ಏನೂ ಉಪಯೋಗವಾಗಿಲ್ಲ. ಕಸ-ಕಡ್ಡಿಗಳಿಂದ ಚರಂಡಿಗಳು ತುಂಬಿದ್ದರೂ ಜನಪ್ರತಿನಿಧಿಗಳು ಹಾಗೂ ಪಂಚಾಯಿತಿ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸುವ ಕೆಲಸ ಮಾತ್ರ ಮಾಡುತ್ತಿಲ್ಲ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನೂ ಇದೇ ಗ್ರಾಮದಲ್ಲಿ ಕೆಲ ಮನೆಗಳ ಮುಂದೆ ಸುಮಾರು 5 ವರ್ಷಗಳಿಂದ ಚರಂಡಿ ವ್ಯವಸ್ಥೆ ಇಲ್ಲದೇ ಇಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ. ಇನ್ನು ಕೆಲವು ಮನೆಗಳ ಮುಂದೆ‌ ಚರಂಡಿಗಳು ಇದ್ದರೂ ಅವುಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವವರು ಇಲ್ಲ ಎಂದು ದೂರಿದ್ದಾರೆ.

ಇನ್ನಾದರೂ ಚರಂಡಿ ಸ್ವಚ್ಛತೆ ಮಾಡಿಸಿ ಸೊಳ್ಳೆಗಳ ಕಾಟದಿಂದ, ರೋಗ ರುಜಿನಗಳಿಂದೆ ನಮ್ಮನ್ನು ರಕ್ಷಿಸಬೇಕೇಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪಂಚಾಯಿತಿ ವತಿಯಿಂದ ಗ್ರಾಮದಲ್ಲಿರುವ ಚರಂಡಿಗಳನ್ನು ಸ್ವಚ್ಛತೆ ಮಾಡಲಾಗುತ್ತಿದೆ. ಸ್ವಚ್ಛವಾಗದ ಚರಂಡಿಗಳನ್ನು ಸಹ ಕೂಡಲೇ ಸ್ವಚ್ಛ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮಗಳ ಸ್ವಚ್ಛತೆಯೇ ನಮ್ಮ ಆದ್ಯತೆ ಎಂದು ಪಂಚಾಯಿತಿ ಅಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

27 minutes ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

3 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

18 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

21 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

24 hours ago