ಸ್ವಚ್ಛ ಜಾಗೃತಿ ಜಾಥಾಗೆ ಶಾಸಕ ಧೀರಜ್‌ ಮುನಿರಾಜ್ ಚಾಲನೆ

ದೊಡ್ಡಬಳ್ಳಾಪುರ ನಗರವನ್ನು ಸ್ವಚ್ಛ, ನೈರ್ಮಲ್ಯ, ಸುಂದರ, ತ್ಯಾಜ್ಯ ಮುಕ್ತ ನಗರವನ್ನಾಗಿಸಲು ನಗರಸಭೆ ಹಾಗೂ ಪರಿವರ್ತನಾ ಮಹಿಳಾ ಮಂಡಲ ವತಿಯಿಂದ ಇಂದು ಸ್ವಚ್ಛ ಜಾಗೃತಿ ಜಾಥಾವನ್ನ ಹಮ್ಮಿಕೊಳ್ಳಲಾಗಿತ್ತು.

ತ್ಯಾಜ್ಯದ ಪ್ರಮಾಣ ಕಡಿಮೆ ಮಾಡಲು, ಮರು ಬಳಕೆ ಹಾಗೂ ಸಂಸ್ಕರಣೆ‌ ಮಾಡುವ ಪರಿಕಲ್ಪನೆ ಮತ್ತು ಎಲ್ಲೆಂದರಲ್ಲಿ ತ್ಯಾಜ್ಯವನ್ನು ಎಸೆಯದಂತೆ ನಗರ ನಿವಾಸಿಗಳಲ್ಲಿ ಅರಿವು ಮೂಡಿಸಲು ನಗರದ ನಗರಸಭೆ ಕಾರ್ಯಾಲಯ ಆವರಣದಲ್ಲಿ ಸ್ವಚ್ಛತಾ ಜಾಥಾಗೆ ಶಾಸಕ ಧೀರಜ್‌ ಮುನಿರಾಜ್ ಚಾಲನೆ ನೀಡಿದರು.

ನಂತರ ನಗರದ ಪ್ರಮುಖ ಬೀದಿಗಳು, ವೃತ್ತಗಳಲ್ಲಿ ನಡಿಗೆ ಮೂಲಕ ಸಂಚರಿಸಿ ನಗರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯದ ಪ್ರಮಾಣ ತಗ್ಗಿಸಲು ಮತ್ತು ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್, ಉಪಾಧ್ಯಕ್ಷೆ ಫರ್ಹಾನಾ ತಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಆದಿಲಕ್ಷ್ಮಿ, ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

2 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

2 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

6 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

8 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

11 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

15 hours ago