ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಗಸ್ಟ್ 15 ರಂದು ನಡೆಯಲಿರುವ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನಲ್ಲಿ ಸರ್ಕಾರಿ ಸೇವೆ, ಪೊಲೀಸ್ ಸೇವೆ, ಜನಪದ, ಸಾಹಿತ್ಯ, ಕಲೆ, ಕೃಷಿ, ಸಮಾಜಸೇವೆ, ಮಾಧ್ಯಮ, ಶಿಕ್ಷಣ, ಕ್ರೀಡೆ, ಎನ್‍ಸಿಸಿ, ಯೋಧರು, ಪೌರಸೇವಕರು ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಅರ್ಹರು ತಮ್ಮ ಸಾಧನೆ ಹಾಗೂ ವೈಯಕ್ತಿಕ ಮಾಹಿತಿಯನ್ನು ಆಗಸ್ಟ್ 10 ಒಳಗಾಗಿ ತಾಲ್ಲೂಕು ಕಚೇರಿಗೆ ಸಲ್ಲಿಸಬೇಕು ಎಂದು ತಹಶೀಲ್ದಾರ್ ವಿಭಾವಿದ್ಯಾ ರಾಥೋಡ್ ತಿಳಿಸಿದ್ದಾರೆ.