ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ, ಬೈಕ್‌ಗಳಲ್ಲಿ ಬಂದು ಡೆಡ್ಲಿ ವ್ಹೀಲಿಂಗ್ ನಡೆಸಿ ಹುಚ್ಚಾಟ ಮೆರೆದ ಘಟನೆ ನಡೆದಿದೆ.
ಬೆಂಗಳೂರಿನಿಂದ ನೂರಾರು ಬೈಕ್‌ಗಳಲ್ಲಿ ಬಂದಿದ್ದ ಯುವಕರು ಹೆದ್ದಾರಿಯಲ್ಲಿ ವಾಹನ ಸಂಚಾರದ ನಡುವೆಯೇ ವ್ಹೀಲಿಂಗ್ ನಡೆಸುತ್ತಿದ್ದು, ನಾ ಮುಂದು, ತಾ ಮುಂದು ಎಂಬಂತೆ ಅಪಾಯಕಾರಿ ಸಾಹಸಕ್ಕೆ ಮುಂದಾಗಿದ್ದರು. ಕೆಲವರು ನಂಬರ್ ಪ್ಲೇಟ್ ಇಲ್ಲದ ಬೈಕ್‌ಗಳಲ್ಲಿಯೂ ವ್ಹೀಲಿಂಗ್ ನಡೆಸಿರುವುದು ಕಂಡುಬಂದಿದೆ.
ಇದರ ಜೊತೆಗೆ ಕೆಲ ಆಟೋ ಚಾಲಕರೂ ಕೂಡ ಆಟೋಗಳನ್ನು ವ್ಹೀಲಿಂಗ್ ಮಾಡಿಸಿ ಹೆದ್ದಾರಿಯಲ್ಲಿ ಅಪಾಯಕಾರಿ ರೀತಿಯಲ್ಲಿ ಸಂಚರಿಸಿರುವುದು ಕಂಡುಬಂದಿದ್ದು, ಇತರೆ ವಾಹನ ಸವಾರರಲ್ಲಿ ಆತಂಕ ಮೂಡಿಸಿತು. ಹೆದ್ದಾರಿಯಲ್ಲಿ ಏಕಾಏಕಿ ವ್ಹೀಲಿಂಗ್ ನಡೆಸುತ್ತಿದ್ದರಿಂದ ಅಪಘಾತ ಸಂಭವಿಸುವ ಭೀತಿ ಎದುರಾಗಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ದೇವನಹಳ್ಳಿ ಸಂಚಾರಿ ಪೊಲೀಸರು ವ್ಹೀಲಿಂಗ್ ನಡೆಸುತ್ತಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಸುಮಾರು ಐದಾರು ಬೈಕ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸುವ ಪ್ರಕ್ರಿಯೆ ಕೈಗೊಂಡಿದ್ದಾರೆ.
ವಶಕ್ಕೆ ಪಡೆದ ಬೈಕ್ ವ್ಹೀಲರ್‌ಗಳಿಗೆ ಸಂಚಾರಿ ಠಾಣೆಯ ಇನ್ಸ್‌ಪೆಕ್ಟರ್ ಮುರುಳಿಧರ್ ಅವರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದು, ಹೆದ್ದಾರಿಯಲ್ಲಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ವ್ಹೀಲಿಂಗ್ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.
ಸ್ವಾತಂತ್ರ್ಯ ದಿನದಂದು ಸಂಭ್ರಮಾಚರಣೆ ಹೆಸರಿನಲ್ಲಿ ಹೆದ್ದಾರಿಯಲ್ಲಿ ಅಪಾಯಕಾರಿ ವ್ಹೀಲಿಂಗ್ ನಡೆಸಿದವರ ವಿರುದ್ಧ ಪೊಲೀಸರು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…