ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ನಡುವೆ ಸಾರ್ವಜನಿಕರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವ ಉದ್ದೇಶದಿಂದ ನಗರದ ಪ್ರತಿಷ್ಠಿತ ಹೀಲಿನ್ ಆಸ್ಪತ್ರೆ ವತಿಯಿಂದ ಕ್ರೀಡಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರದಲ್ಲಿ ಸಾರ್ವಜನಿಕರಿಗೆ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪ್ರಮಾಣ (ಶುಗರ್) ಸೇರಿದಂತೆ ವಿವಿಧ ಪ್ರಾಥಮಿಕ ಆರೋಗ್ಯ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಯಿತು.

ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರು ಹಾಗೂ ವಿವಿಧ ವಯೋಮಾನದವರು ಶಿಬಿರದಲ್ಲಿ ಪಾಲ್ಗೊಂಡು ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಂಡರು.

ಇತ್ತೀಚಿನ ದಿನಗಳಲ್ಲಿ ಬಿಪಿ, ಶುಗರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಸಾಮಾನ್ಯವಾಗುತ್ತಿದ್ದು, ಆರಂಭಿಕ ಹಂತದಲ್ಲಿಯೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಅನುಕೂಲವಾಗುವಂತೆ ಕ್ರೀಡಾಂಗಣದಲ್ಲಿಯೇ ಶಿಬಿರ ಆಯೋಜಿಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಶಿಬಿರಕ್ಕೆ ಆಗಮಿಸಿದ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಅಗತ್ಯ ಮಾಹಿತಿ ಹಾಗೂ ಸಲಹೆಗಳನ್ನು ನೀಡಲಾಯಿತು.

 ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ಮುಂದಿನ ಹಂತದಲ್ಲಿ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಹಾಗೂ ಸಲಹೆ ಪಡೆಯುವಂತೆ ತಿಳಿಸಲಾಯಿತು. ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆಯ ಅವಕಾಶವನ್ನು ಸದುಪಯೋಗಪಡಿಸಿಕೊಂಡರು.

ಪ್ರತಿ ಸೋಮವಾರ ಉಚಿತ ಆರೋಗ್ಯ ತಪಾಸಣೆ

ಈ ಕುರಿತು ಹೀಲಿನ್ ಆಸ್ಪತ್ರೆಯ ಮಾಲೀಕ ಡಾ. ವೆಂಕಟೇಶ್ ಪ್ರಸಾದ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ಭಗತ್ ಸಿಂಗ್ ಮೈದಾನದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ಹೇಳಿದರು.

ಆರೋಗ್ಯ ತಪಾಸಣೆಯನ್ನು ಕೇವಲ ಅನಾರೋಗ್ಯ ಉಂಟಾದಾಗ ಮಾತ್ರ ಮಾಡಿಸಿಕೊಳ್ಳುವ ಬದಲು, ನಿಯಮಿತವಾಗಿ ಆರೋಗ್ಯ ಪರಿಶೀಲನೆ ಮಾಡಿಸಿಕೊಳ್ಳುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ನಿರಂತರವಾಗಿ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿಯೂ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಪ್ರತಿ ಸೋಮವಾರ ಸಂಜೆ 5ರಿಂದ 6.30ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ಹಿಂಜರಿಕೆಯಿಲ್ಲದೆ ಶಿಬಿರಕ್ಕೆ ಆಗಮಿಸಿ ತಮ್ಮ ಬಿಪಿ, ಶುಗರ್ ಸೇರಿದಂತೆ ಅಗತ್ಯ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಮೂಲಕ ಹಲವು ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಹೀಲಿನ್ ಆಸ್ಪತ್ರೆ ವತಿಯಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿಯೂ ಇಂತಹ ಆರೋಗ್ಯ ಸೇವಾ ಕಾರ್ಯಕ್ರಮಗಳನ್ನು ಮುಂದುವರಿಸುವ ಉದ್ದೇಶವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಡಾ. ವೆಂಕಟೇಶ್ ಪ್ರಸಾದ್ ಮನವಿ ಮಾಡಿದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

3 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

5 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

9 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

10 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

16 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

16 hours ago