“ಸ್ವಾತಂತ್ರ್ಯ ದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ”- ಪಿಎಂ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ Narendra Modi ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್ ಎಸ್ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯಹೋರಾಟ, ರಾಷ್ಟ್ರಧ‍್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯಹೋರಾಟದಲ್ಲಿ ಎಂದೂ ಭಾಗವಹಿಸದೆ ಇದ್ದ ಮತ್ತು ಇತ್ತೀಚಿನ ವರೆಗೆ ನಮ್ಮ ಹೆಮ್ಮೆಯ ತ್ರಿವರ್ಣ ರಾಷ್ಟ್ರಧ್ವಜವನ್ನು ತಮ್ಮ ಕಚೇರಿಯಲ್ಲಿ ಆರೋಹಣ ಮಾಡಲು ನಿರಾಕರಿಸಿದ್ದ ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸುವ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪವಿತ್ರವಾದ ವೇದಿಕೆಯನ್ನು ನರೇಂದ್ರ ಮೋದಿ ಅವರು ತಮ್ಮ ಸ್ಥಾನದ ಮೂಲಕ ದುರುಪಯೋಗ ಮಾಡಿಕೊಂಡಿದ್ದಾರೆ. ಸ್ವತಂತ್ರ ಭಾರತದಲ್ಲಿ ಬಿಜೆಪಿ Bharatiya Janata Party (BJP) ಸೇರಿದಂತೆ ಯಾವ ಪಕ್ಷಗಳ ಪ್ರಧಾನ ಮಂತ್ರಿಯವರೂ ಈ ರೀತಿ ಸ್ವಾತಂತ್ರ್ಯೋತ್ಸವದ ವೇದಿಕೆಯನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿಲ್ಲ. ನರೇಂದ್ರ ಮೋದಿಯವರು ದೇಶದ ಜನ ಗೌರವಿಸುವ ಈ ವೇದಿಕೆಯ ಘನತೆ-ಗೌರವಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಆರ್ ಎಸ್ ಎಸ್ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆಗಳೇ ಇಲ್ಲ. ಅದೇ ರೀತಿ ನಾಗಪುರದಲ್ಲಿರುವ ಆರ್ ಎಸ್ ಎಸ್ ನ ಕೇಂದ್ರ ಕಚೇರಿಯಲ್ಲಿ 2001ರ ವರೆಗೆ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ದಿನವೂ ರಾಷ್ಟ್ರ ಧ್ವಜದ ಧ್ವಜಾರೋಹಣ ಮಾಡಿರಲೇ ಇಲ್ಲ. 2001ರಲ್ಲಿ ಧ್ವಜಾರೋಹಣ ಮಾಡಿದ್ದ ತಮ್ಮದೇ ಸಂಘಟನೆಯ ಯುವಕರ ವಿರುದ್ಧ ಆರ್ ಎಸ್ ಎಸ್ ದೂರು ಕೊಟ್ಟು ಜೈಲಿಗೆ ಅಟ್ಟಿತ್ತು ಎನ್ನುವುದನ್ನು ದೇಶದ ಜನ ಮರೆತಿಲ್ಲ. ಕೆಂಪುಕೋಟೆ ಭಾರತೀಯ ಜನತಾ ಪಕ್ಷದ ರಾಜಕೀಯ ವೇದಿಕೆ ಅಲ್ಲ, ಆ ಸ್ಥಳದಲ್ಲಿ ಪಕ್ಷಾತೀತವಾಗಿ ಆಚರಿಸಲಾಗುವ ಸ್ವಾತಂತ್ರ್ಯತ್ಸೋವದಲ್ಲಿ ಎಲ್ಲ ಜಾತಿ-ಧರ್ಮ, ಪಕ್ಷ-ಪಂಥಗಳ ಜನ ಭಾಗವಹಿಸುತ್ತಾರೆ. ಅಂತಹ ಪವಿತ್ರ ವೇದಿಕೆಯಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮಾತನಾಡದೆ ಆರ್ ಎಸ್ ಎಸ್ ಪ್ರಚಾರಕನಂತೆ ಮಾತನಾಡಿರುವುದು ದುರದೃಷ್ಟಕರ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕಳೆದ ಹನ್ನೊಂದು ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ದಿನ ಆರ್ ಎಸ್ ಎಸ್ ಅನ್ನು ನೆನಪು ಮಾಡಿಕೊಳ್ಳದ ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಆರ್ ಎಸ್ ಎಸ್ ಸೇವೆಯನ್ನು ಸ್ಮರಿಸಿಕೊಂಡಿರುವುದು ಖಂಡಿತ ಅದರ ಮೇಲಿನ ಅಭಿಮಾನದಿಂದ ಅಲ್ಲ. ಇದಕ್ಕೆ ಮುಖ್ಯ ಕಾರಣ ಕುಸಿಯುತ್ತಿರುವ ಜನಪ್ರಿಯತೆಯಿಂದಾಗಿ ಅವರಲ್ಲಿ ಹುಟ್ಟಿರುವ ಅಭದ್ರತೆ. ಕಳೆದ ಚುನಾವಣೆಯಲ್ಲಿನ ಹಿನ್ನಡೆಯ ನಂತರ ಮೋದಿಯವರು ತಮ್ಮ ಮಾತೃಸಂಸ್ಥೆಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಶ್ವದ ಅತಿ ದೊಡ್ಡ ಸರ್ಕಾರೇತರ ಸೇವಾ ಸಂಸ್ಥೆ ಎಂದು ನರೇಂದ್ರ ಮೋದಿ ಅವರು ಬಣ್ಣಿಸಿರುವ ಆರ್ ಎಸ್ ಎಸ್,  ಇಂದಿನ ವರೆಗೂ ಅಧಿಕೃತವಾಗಿ ನೋಂದಣಿಯಾಗದ, ಸಾರ್ವಜನಿಕ ದೇಣಿಗೆ ಸಂಗ್ರಹಿಸಿದರೂ ತೆರಿಗೆ ಪಾವತಿ ಮಾಡದ ಮತ್ತು ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ  ತೊಡಗಿರುವ ಸಂಘಟನೆಯಾಗಿದೆ ಎಂದಿದ್ದಾರೆ.

ಪಾರದರ್ಶಕತೆಯಾಗಲಿ, ಉತ್ತರದಾಯಿತ್ವವಾಗಲಿ ಇಲ್ಲದ ಆರ್ ಎಸ್ ಎಸ್ ರಹಸ್ಯ ಸಂಘಟನೆಯಾಗಿಯೇ ಕೆಲಸ ಮಾಡುತ್ತಿರುವುದನ್ನು ದೇಶದ ಜನತೆ ಗಮನಿಸದ್ದಾರೆ. ಕೋಮುವಾದವನ್ನೇ ಉಸಿರಾಗಿಸಿಕೊಂಡ ಆರ್ ಎಸ್ ಎಸ್ ಹಿಂದೂ ಧರ್ಮವನ್ನು ರಾಜಕೀಯ ಆಯುಧವಾಗಿ ಬಳಸಿಕೊಂಡು ಭಾರತೀಯರನ್ನು ಒಡೆದು ಹಾಕಿ ಭಾರತೀಯ ಜನತಾ ಪಕ್ಷವನ್ನು ರಾಜಕೀಯವಾಗಿ ಬಲಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿದೆ. ಇವರಿಗೆ ದೇಶದ ಬಗ್ಗೆಯಾಗಲಿ, ಹಿಂದೂ ಧರ್ಮದ ಬಗ್ಗೆಯಾಗಲಿ ಯಾವ ಪ್ರೀತಿ-ಅಭಿಮಾನ, ಬದ್ಧತೆಯಾಗಲಿ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

Ramesh Babu

Journalist

Recent Posts

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

3 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

15 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

16 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

23 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 days ago