ಸ್ವಾಮಿ ವಿವೇಕಾನಂದರು ಇಡೀ ಜಗತ್ತು ಕಂಡ ಶ್ರೇಷ್ಠ ತತ್ವಜ್ಞಾನಿ- ಎಂ.ಎಸ್.ವಿ ಪಬ್ಲಿಕ್ ಶಾಲೆ ಸಂಸ್ಥಾಪಕ ಎ.ಸುಬ್ರಮಣ್ಯ

ಸ್ವಾಮಿ ವಿವೇಕಾನಂದರು ಇಡೀ ಜಗತ್ತು ಕಂಡ ಶ್ರೇಷ್ಠ ತತ್ವಜ್ಞಾನಿ, ಧೀರ ಸನ್ಯಾಸಿ. ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತವನ್ನು ಅಜ್ಞಾನ, ಅಂಧಕಾರ, ಮೂಢನಂಬಿಕೆಯಿಂದ ಕೂಡಿದ ದೇಶವೆಂದು ಹೀಗೆಳೆಯುವಾಗ, ಜ್ಞಾನ, ಆಧ್ಯಾತ್ಮ ಚಿಂತನೆ ಮತ್ತು ಸಂಸ್ಕೃತಿಯಲ್ಲಿ ಎಲ್ಲಾ ದೇಶಗಳನ್ನು ಮೀರಿಸುವ ಶಕ್ತಿ ಭಾರತಕ್ಕಿದೆ ಎಂದು ಸಾಬೀತುಪಡಿಸಿ ಇಡೀ ಜಗತ್ತು ಭಾರತದ ಕಡೆ ಹೆಮ್ಮೆಯಿಂದ ನೋಡುವಂತ ಮಾಡಿದ ದಾರ್ಶನಿಕರು ಸ್ವಾಮಿ ವಿವೇಕಾನಂದರು ಎಂದು ಎಂ.ಎಸ್.ವಿ ಪಬ್ಲಿಕ್ ಶಾಲೆಯ ಸಂಸ್ಥಾಪಕರಾದ ಎ. ಸುಬ್ರಮಣ್ಯ ಹೇಳಿದರು.

ನಗರದ ಎಂ.ಎಸ್.ವಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಿ ಮಾತನಾಡಿದ ಅವರು, ಮಹಾತ್ಮರ ಚಿಂತನೆಗಳು ನಮಗೆ ಆದರ್ಶಪ್ರಾಯವಾಗಬೇಕು. ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಳ್ಳುವುದರ ಮೂಲಕ ಭಾರತ ವಿಶ್ವಗುರುವಾಗುವ ನಿಟ್ಟಿನಲ್ಲಿ ತಾವೆಲ್ಲಾ ಶ್ರದ್ಧೆ, ನಿಷ್ಠೆಯಿಂದ ವಿದ್ಯಾರ್ಜನೆ ಮಾಡಬೇಕೆಂದು ಹಿತವಚನ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಂದ ಭಾಷಣ, ಪ್ರತಿಜ್ಞಾವಿಧಿ ಬೋಧನೆ, ಹಾಡು ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಶಾಲೆಯ ಕಾರ್ಯದರ್ಶಿಗಳಾದ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್, ಟ್ರಸ್ಟಿ ನಯನಾ ಸ್ವರೂಪ್, ಪ್ರಾಂಶುಪಾಲೆ ರೆಮ್ಯಾ ಬಿ.ವಿ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *