ಸ್ವಾಮಿ ವಿವೇಕಾನಂದರು ಯುವಜನತೆಗೆ ಸ್ಫೂರ್ತಿ- ಎಂ.ಆರ್.ಶ್ರೀನಿವಾಸ್

ಸ್ವಾಮಿ ವಿವೇಕಾನಂದರು ಪಶ್ಚಿಮ ರಾಷ್ಟ್ರಗಳಿಗೆ ವೇದಾಂತದ ಹಿಂದು ತತ್ವಗಳನ್ನು ಮತ್ತು ಯೋಗವನ್ನು ಪರಿಚಯಿಸಿದ ಪ್ರಮುಖರಲ್ಲಿ ಅಗ್ರಗಣ್ಯರಾಗಿ ನಿಲ್ಲುತ್ತಾರೆ ಎಂದು ಲಯನ್ಸ್ ಕ್ಲಬ್ ನ ವಲಯ ಅಧ್ಯಕ್ಷರಾದ ಎಂ.ಆರ್ .ಶ್ರೀನಿವಾಸ ಅವರು ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಮತ್ತು ಅಕ್ಷಯ ಲಿಯೋ ಕ್ಲಬ್ ನ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ ಪ್ರಪಂಚದ ಇತರೆ ದೇಶಗಳಿಗೂ ಸಹ ಅವರ ತತ್ವಗಳು, ಯುವ ಜನತೆಗೆ ನೀಡಿದ ಸ್ಫೂರ್ತಿಯ ಕರೆಗಳು,  ಯುವಜನತೆಗೆ ನೀಡಿದ ಅವರ ಕರೆ ‘ಏಳಿ.. ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬುದು ಸರ್ವ ಕಾಲಕ್ಕೂ ನೆನೆಯುವ, ಯುವಕರನ್ನು ಒಳ್ಳೆಯ ಕೆಲಸಗಳಿಗೆ ಬಡಿದೆಚ್ಚರ ಮಾಡುವ ಸಾಲುಗಳು ಎಂದರು.

ಆರ್.ಎಲ್.ಜಾಲಪ್ಪ ಕ್ಯಾಂಪಸ್ ನ ಲಯನ್ಸ ಕ್ಲಬ್ ನ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ ಮಾತನಾಡಿ, ಸ್ವಾಮಿ ವಿವೇಕಾನಂದರ  ಕೊಡುಗೆ, ಸೇವೆಗಳ ನೆನಪಿಗಾಗಿ, ಅವರಿಂದ ಸದಾ ಸ್ಫೂರ್ತಿಯಾಗಿರಲು ಅವರ ಜನ್ಮ ದಿನವನ್ನು ‘ರಾಷ್ಟ್ರೀಯ ಯುವ ದಿನ’  ಎಂದು ಆಚರಣೆ ಮಾಡಲಾಗುತ್ತದೆ, ಪ್ರಪಂಚದ ಪ್ರಮುಖ ಧರ್ಮಗಳ ಪೈಕಿ ಹಿಂದು ಧರ್ಮವು ಒಂದು ಶ್ರೇಷ್ಠ ಧರ್ಮ ಎಂಬ ಭಾವನೆ ಮೂಡಿಸಿದವರಲ್ಲಿ  ವಿವೇಕಾನಂದರ ಪಾತ್ರ ಹಿರಿದು  ಎಂದರು.

ಆರ್ .ಎಲ್ .ಜಾಲಪ್ಪ ಕ್ಯಾಂಪಸ್ ನ  ಲಯನ್ಸ್ ಕ್ಲಬ್ ನ ಉಪಾಧ್ಯಕ್ಷರಾದ ಜೆ. ರಾಕೇಶ್ ಮಾತನಾಡಿ, ವಿವೇಕಾನಂದರು ಹಲವಾರು ಕಷ್ಟ ಕಾರ್ಪಣ್ಯಗಳ ನಡುವೆ, ಹಲವಾರು ಸಮಸ್ಯೆಗಳನ್ನು ಎದುರಿಸಿ ಅವಕಾಶಗಳನ್ನು ಗಿಟ್ಟಿಸಿಕೊಂಡು ದೇಶಕ್ಕೆ ಮಾದರಿಯಾದಂತಹ ವ್ಯಕ್ತಿತ್ವವನ್ನು ರೂಪಿಸಿಕೊಂಡರು ಎಂದರು.

ಪ್ರಬಂಧ ಸ್ಪರ್ದೆ, ಚರ್ಚಾ ಸ್ಪರ್ಧೆ ಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ನಾಗರಾಜ, ಶ್ರೀ ದೇವರಾಜ ಅರಸ್ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ. ಚಿಕ್ಕಣ್ಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹಾಂತೇಶಪ್ಪ, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಜಿಯಾವುಲ್ಲಾ ಖಾನ್, ಲಯನ್ಸ್ ಕ್ಲಬ್ ನ ಖಜಾಂಚಿ ಗಳಾದ ರವಿಕುಮಾರ್, ಅಕ್ಷಯ ಲಿಯೋ ಕ್ಲಬ್ ನ ಅಧ್ಯಕ್ಷ ಪೃಥ್ವಿ, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬು ಸಾಬಿ, ಅಕ್ಷಯ ಲಿಯೋ ಕ್ಲಬ್ ನ ಪದಾಧಿಕಾರಿಗಳು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!