ದೊಡ್ಡಬಳ್ಳಾಪುರ: ಕಾಲೇಜುಗಳಲ್ಲಿ ಉದ್ಯೋಗ ಮೇಳಗಳು ನಡೆಸುವುದರಿಂದ ಗ್ರಾಮೀಣ ಪ್ರದೇಶದ ಬಡ ಮಕ್ಕಳ ಸ್ವಾಲಂಬಿ ಬದುಕಿಗೆ ದಾರಿ ತೋರಿಸಿದಂತಾಗುತ್ತದೆ ಮತ್ತು ನಿರುದ್ಯೋಗ ಸಮಸ್ಯೆ ನಿವಾರಣೆಗೂ ಸಹಕಾರಿಯಾಗುತ್ತದೆ ಎಂದು ಗೌರ್ನಿಂಗ್ ಕೌನ್ಸಿಲ್ ನ ಸದಸ್ಯರಾದ ಜೆ.ರಾಕೇಶ್ ಹೇಳಿದರು.
ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಉದ್ಯೋಗ ಮತ್ತು ತರಬೇತಿ ವಿಭಾಗ ಮತ್ತು ವೃಕ್ಷ ಆರ್ಗ್ಯಾನಿಕ್ ಇವರ ಸಹಯೋಗದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಉದ್ಯೋಗ ಮೇಳಗಳನ್ನು ಕಾಲೇಜುಗಳಲ್ಲಿ ನಡೆಸುವುದರಿಂದ ಗ್ರಾಮೀಣ ಬಡ ಮಕ್ಕಳಿಗೆ ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ ಅಲ್ಲದೆ ಅವರ ಬದುಕು ಹಸನಾಗಲು ನೆರವಾದ ತೃಪ್ತಿಯು ಸಿಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಗೌರಪ್ಪ ಮಾತನಾಡಿ ಉದ್ಯೋಗ ಆಧಾರಿತ ಶಿಕ್ಷಣ ಪದ್ಧತಿ ಇಂದಿನ ಅಗತ್ಯವಾಗಿದೆ, ಇಂಜಿನಿಯರಿಂಗ್, ಡಿಪ್ಲೋಮೋ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರವೇ ಉದ್ಯೋಗ ಮೇಳಗಳು ಎಂಬ ಭಾವನೆ ಇಂದಿಗೂ ಇದೆ, ಆದರೆ ಪದವಿ ಶಿಕ್ಷಣ ಮುಗಿಸಿದವರಿಗೂ ಉದ್ಯೋಗ ಮೇಳಗಳು ನಡೆಸುವ ಮೂಲಕ ಪದವಿ ಶಿಕ್ಷಣಕ್ಕೂ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವೃಕ್ಷ ಆರ್ಗ್ಯಾನಿಕ್ ಕಂಪನಿಯ ರಾಹುಲ್, ಶ್ರೇಯಸ್,ಮೋಹಿತ್ ಕಾಲೇಜಿನ ಉಪ ಪ್ರಾಂಶುಪಾಲರಾದ ಕೆ.ದಕ್ಷಿಣಮೂರ್ತಿ, ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ, ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರುಗಳಾದ ಅಲ್ಲಾಭಕಾಶ್, ಮಧುಶ್ರೀ, ನಂದನ ಪ್ರಾಧ್ಯಾಪಕರಾದ ದಿವ್ಯ, ಕಿರಣ್ ಆದೇಶ್, ಮತ್ತಿತರರು ಹಾಜರಿದ್ದರು.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…