ಹಂದಿ ಶೆಡ್ ನಲ್ಲಿದ್ದ ಸುಮಾರು 30 ಹಂದಿ ಮರಿಗಳನ್ನು ಕದ್ದೊಯ್ದ ಕಳ್ಳರು. ದೊಡ್ಡಬಳ್ಳಾಪುರ ತಾಲೂಕಿನ ಬೈರಸಂದ್ರ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಹಂಡಿ ಶೆಡ್ ಬಳಿ ಮಾಲೀಕರು ಹೋದ ಸಂದರ್ಭದಲ್ಲಿ ಹಂದಿ ಮರಿಗಳು ಕಳವು ಪ್ರಕರಣ ಬೆಳಕಿಗೆ ಬಂದಿದೆ.
ಕದಿಯುವ ಭರದಲ್ಲಿ ಕಳ್ಳರು ತಮ್ಮ ಜರ್ಕಿನ್ ನ್ನು ಸ್ಥಳದಲ್ಲೇ ಬಿಟ್ಟು ಹೋಗಿರುವುದು ಕಂಡುಬಂದಿದೆ.
ಬೈರಸಂದ್ರ ಗ್ರಾಮದ ದಿವಾಕರ್ ಎಂಬುವರಿಗೆ ಸೇರಿದ ಹಂದಿ ಶೆಡ್ ಇದಾಗಿದ್ದು, ಇವರು ಹಲವು ವರ್ಷಗಳಿಂದ ಊರ ಹೊರವಲಯದಲ್ಲಿ ಶೆಡ್ ಮಾಡಿಕೊಂಡು ಹಂದಿ ಸಾಕಾಣಿಕೆ ಮಾಡುತ್ತಿದ್ದರು. ಶೆಡ್ ನಲ್ಲಿ ಸುಮಾರು 100ಕ್ಕೂ ಹೆಚ್ಚು ಹಂದಿಗಳಿದ್ದವು ಎನ್ನಲಾಗಿದೆ.
ಕಳೆದ ರಾತ್ರಿ ಮಳೆಯಾಗುತ್ತಿತ್ತು, ಶೆಡ್ ಮಾಲೀಕರು ಶೆಡ್ ಬಳಿ ಇಲ್ಲದ ಸಮಯದಲ್ಲಿ, ಶೆಡ್ ಬಳಿ ಬಂದ ಕಳ್ಳರು ವಾಹನದಲ್ಲಿ ಹಂದಿ ಮರಿಗಳನ್ನ ಕಳವು ಮಾಡಿದ್ದಾರೆ. ಕಳ್ಳರ ನಡೆದಾಡಿರುವ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಇದರ ಜೊತೆಗೆಯಲ್ಲಿ ಕಳ್ಳನೊಬ್ಬ ತನ್ನ ಜರ್ಕಿನ್ ಮರೆತು ಹೋಗಿದ್ದಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…