ದುಡ್ಡೇ ದೊಡ್ಡಪ್ಪ…., ದುಡ್ಡು ಇದ್ರೆ ದುನಿಯಾ… ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ….! ಹೀಗೆ ನಾನಾ ರೀತಿಯಾಗಿ ಹಣದ ಬಗ್ಗೆ ಜನ ಮಾತಾಡುತ್ತಾರೆ. ಕಾಸಿಗಾಗಿ ಯಾರೂ ಏನು ಬೇಕಾದರೂ ಮಾಡೋದಕ್ಕೆ ತಯಾರಿಯಾಗಿರುತ್ತಾರೆ.
ಹಣಕ್ಕಾಗಿ ಮೋಸ, ವಂಚನೆ, ಕಳ್ಳತನ, ದರೋಡೆ, ಕೊಲೆ ಸೇರಿದಂತೆ ಇತರೆ ಅಪರಾಧ ಕೃತ್ಯಗಳಲ್ಲಿ ಜನ ತೊಡಗುತ್ತಾರೆ.
ಇದೇ ರೀತಿಯ ಘಟನೆಯೊಂದು ಇದೀಗ ನಡೆದಿದ್ದು, ಮಹಿಳೆಯೊಬ್ಬಳು ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ.
ಮದುವೆ ಆಗೋದು ದುಡ್ಡು, ಚಿನ್ನ ದೋಚಿ ತಾಳಿ ಕಟ್ಟಿದ ಗಂಡನನ್ನು ಬಿಟ್ಟು ಪರಾರಿ ಆಗೋದು, ಮತ್ತೆ ಕೆಲ ದಿನಗಳ ಬಳಿಕ ಮತ್ತೊಬ್ಬ ಯುವಕನ ಜೊತೆ ಮ್ಯಾರೇಜ್ ಆಗೋದು ಈಕೆಯ ಕೆಲಸ. ಹೀಗೆ ವಂಚಿಸಿ ದುಡ್ಡು, ಬಂಗಾರ ದೋಚಿ ಪರಾರಿಯಾಗುತ್ತಿದ್ದ ಈ ಕಿಲಾಡಿ ಲೇಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.
ಈ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಇಲ್ಲಿನ ತಿರುಪುರದಲ್ಲಿನ 35 ವರ್ಷದ ಅವಿವಾಹಿತ ಯುವಕನೊಬ್ಬ ಆನ್‌ಲೈನ್ ಪ್ಲಾಟ್‌ಫಾರ್ಮ್ ʼದಿ ತಮಿಳು ವೇʼ ನಲ್ಲಿ ಪರಿಚಯವಾದ ಸಂಧ್ಯಾ (30) ಎಂಬ ಮಹಿಳೆಯನ್ನು ಕೆಲ ಸಮಯದ ಹಿಂದೆ ಮದುವೆಯಾಗಿದ್ದನು. ಮದುವೆಯಾದ ಕೆಲ ದಿನಗಳ ಬಳಿಕ ಆಕೆಯ ವರ್ತನೆಯಲ್ಲಿ ತೀರಾ ಬದಲಾವಣೆ ಕಂಡು ಬಂದಿದ್ದು, ನಂತರ ಆತ ಸಂಧ್ಯಾಳ ಆಧಾರ್ ಕಾರ್ಡ್ ಪರಿಶೀಲಿಸಿದ್ದಾರೆ. ಆಧಾರ್ ಕಾರ್ಡ್ ದಾಖಲೆಯಲ್ಲಿ ಸಂಧ್ಯಾಳ ಪತಿಯ ಹೆಸರು ಬೇರೆಯೇ ಇದೆ. ತನಗೆ ವಂಚನೆ ಮಾಡಿದ್ದಾಳೆ ಎಂದು ತಿಳಿದ ಈ ಯುವಕ ತಾರಾಪುರಂ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾನೆ. ಪೊಲೀಸರು ಸಂಧ್ಯಾಳನ್ನು ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಆಕೆಯ ವಂಚನೆಗಳು ಬಯಲಾಗಿವೆ.
10 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಈಕೆಗೆ ಒಂದು ಮಗು ಕೂಡಾ ಇದೆ. ನಂತರ ತನ್ನ ಮೊದಲ ಪತಿಯಿಂದ ಬೇರ್ಟಟ್ಟು ಹಣದಾಸೆಗೆ ಅವಿವಾಹಿತ ಪುರುಷೆನ್ನೇ ಟಾರ್ಗೆಟ್ ಮಾಡಿ ಮಾದುವೆಯಾಗಿ ಸ್ವಲ್ಪ ದಿನಕ್ಕೆಯೇ ದುಡ್ಡು ಬಂಗಾರವನ್ನು ಎತ್ತಿಕೊಂಡ ಎಸ್ಕೇಪ್ ಆಗುತ್ತಿದ್ದಳು. ಹೀಗೆ ಡಿವೈಎಸ್ಪಿ, ಎಸ್ಪಿ, ಉದ್ಯಮಿಗಳು ಸೇರಿದಂತೆ 50 ಜನರಿಗೆ ವಂಚಿಸಿದ್ದಾಳೆ. ಇದೀಗ ಆಕೆಯ ಮೋಸದಾಟ ಬಯಲಾಗಿದ್ದು, ಪೊಲೀಸರ ಅತಿಥಿಯಾಗಿದ್ದಾಳೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…