Categories: Home

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು…….

ಖರ್ಚು ಮಾಡುವ ಸುಲಭ ಮಾರ್ಗಗಳು,
ಸಂಪಾದನೆ ಮಾಡಲು ಕಠಿಣ ಹಾದಿಗಳು……

ಆಧುನಿಕತೆ – ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ, ಇರುವ ಹಣವನ್ನು ಅತ್ಯಂತ ಸುಲಭವಾಗಿ, ಸುಲಲಿತವಾಗಿ – ಸರಳವಾಗಿ ಕುಳಿತಲ್ಲಿಂದಲೇ ಹೇಗೆ ಬೇಕಾದರೂ, ಯಾರು ಬೇಕಾದರೂ ಹಣ ಖರ್ಚು ಮಾಡಬಹುದು. ನಮಗೆ ಬೇಕಾದ ವಸ್ತುಗಳನ್ನು, ಹೂಡಿಕೆಯನ್ನು, ಪಾವತಿಗಳನ್ನು, ವರ್ಗಾವಣೆಯನ್ನು ಮಾಡಬಹುದು ಮತ್ತು ಕೊಳ್ಳಬಹುದು. ಇದಕ್ಕೆ ಯಾವುದೇ ಶ್ರಮ ಬೇಕಿಲ್ಲ. ಒಂದು ಮೊಬೈಲಿನ ಮೂಲಕವೇ ಕೋಟ್ಯಾಂತರ ಹಣ ಖರ್ಚು ಮಾಡಬಹುದು. ಅದಕ್ಕಾಗಿ ಎಲ್ಲಾ ಬಗೆಯ ವೇದಿಕೆ – ಅವಕಾಶ – ಮೂಲ ಸೌಕರ್ಯ ಅಭಿವೃದ್ಧಿ ಪಡಿಸಲಾಗಿದೆ. ಹಣ ನಮ್ಮ ಬಳಿ ಇರಬೇಕಷ್ಟೇ…

ಆದರೆ ಅದಕ್ಕೆ ವಿರುದ್ಧವಾಗಿ ಹಣ ಸಂಪಾದನೆಯ ಮಾರ್ಗಗಳ ಬಗ್ಗೆ ಒಮ್ಮೆ ಯೋಚಿಸಿ ನೋಡಿ. ಇಷ್ಟು ಸುಲಭವಾಗಿ, ಸರಳವಾಗಿ, ಯಾವುದೇ ಒತ್ತಡವಿಲ್ಲದೇ ಹಣವನ್ನು ಸಂಪಾದನೆ ಮಾಡಲು ಸಾಧ್ಯವೇ. ಹೌದು, ಕೆಲವು ಅಪರೂಪದ ಜೂಜಿನಂತಹ ಸ್ವಲ್ಪ ಅಪಾಯಕಾರಿ ಟ್ರೇಡಿಂಗ್ ವ್ಯವಹಾರ ಹೊರತುಪಡಿಸಿ ಇತರೇ ವಹಿವಾಟು ಮಾಡಲು ಸಾಧ್ಯವೇ…..

ಬಹುಶಃ ಇಂದು ನಮ್ಮೆಲ್ಲರ ಬಹುದೊಡ್ಡ ಸವಾಲು ಇದೇ ಆಗಿದೆ. ಸಂಪಾದನೆ ಮತ್ತು ಲಾಭಗಳು ಕಡಿಮೆಯಾಗುತ್ತಾ, ಖರ್ಚುಗಳು ಹೆಚ್ಚಾಗುತ್ತಾ ಅವುಗಳ ನಡುವೆ ಹೊಂದಾಣಿಕೆ ಸಾಧ್ಯವಾಗುತ್ತಿಲ್ಲ. ಇದು ದಿನೇ ದಿನೇ ಅಧಿಕವಾಗುತ್ತಿದೆ.

ಹಾಗೇ ಒಮ್ಮೆ 30 ವರ್ಷಗಳ ಹಿಂದಿನ ಜನಜೀವನದ ಬಗ್ಗೆ ಯೋಚಿಸಿ. ಮೊಬೈಲ್ ಇರಲಿಲ್ಲ. ಅದರ ಖರ್ಚು ಸಂಪೂರ್ಣ ಉಳಿತಾಯ. ಇಂದು ಅದು ಅನಿವಾರ್ಯ. ಟಿವಿ ಪ್ರಸಾರ ಉಚಿತವಾಗಿತ್ತು. ಬಟ್ಟೆಗಳು ಹಬ್ಬದ ಸಂದರ್ಭದಲ್ಲಿ ಮಾತ್ರ. ಸರ್ಕಾರಿ ಶಾಲೆಗಳಲ್ಲಿ ಅತ್ಯಂತ ಕಡಿಮೆ ದುಡ್ಡು. ಸಾಮಾನ್ಯ ಖಾಯಿಲೆಗೆ ಸರ್ಕಾರಿ ಆಸ್ಪತ್ರೆಗಳೇ ಸಾಕಾಗಿದ್ದವು. ನೀರಿಗೆ ಬಿಲ್ ಇರಲಿಲ್ಲ. ಹುಟ್ಟಿದ ಹಬ್ಬ, ಮದುವೆ ವಾರ್ಷಿಕೋತ್ಸವದ ನೆನಪುಗಳೇ ಇರುತ್ತಿರಲಿಲ್ಲ. ಮನೆಯ ಊಟವೇ ಹೆಚ್ಚು. ಹೋಟೆಲ್ ಮತ್ತು ಇತರ ಬೀದಿ ಬದಿಯ ತಿಂಡಿಗಳು ಅಪರೂಪ. ಫ್ರಿಡ್ಜ್, ವಾಶಿಂಗ್ ಮಿಷಿನ್, ವ್ಯಾಕ್ಯೂಮ್ ಕ್ಲೀನರ್, ಎಸಿ, ವೆಹಿಕಲ್ ಮುಂತಾದವುಗಳ ಅವಶ್ಯಕತೆಯೇ ಇರಲಿಲ್ಲ. ಹೀಗೇ ದಿನೇ ದಿನೇ ನಮ್ಮ ಅವಶ್ಯಕತೆಗಳು ಹೆಚ್ಚಾಗುತ್ತಲೇ ಇವೆ ಮತ್ತು ಅದನ್ನು ಮನೆ ಬಾಗಿಲಿಗೆ ಸಾಲದ ರೂಪದಲ್ಲಿ ಪೂರೈಸಲಾಗುತ್ತದೆ.

ಆದರೆ ಸರ್ಕಾರಿ ಅಧಿಕಾರಿಗಳು ಮತ್ತು ಕೆಲವೇ ನಿರ್ದಿಷ್ಟ ಕ್ಷೇತ್ರಗಳನ್ನು ಹೊರತುಪಡಿಸಿ ಬಹುತೇಕ ಮಧ್ಯಮ ವರ್ಗದ ಜನರ ವ್ಯಾಪಾರ ವಹಿವಾಟುಗಳ ಲಾಭದ ಪ್ರಮಾಣದಲ್ಲಿ ಸ್ಪರ್ಧೆಯ ಕಾರಣದಿಂದಾಗಿ ಕಡಿಮೆ ಆಗುತ್ತಲೇ ಇದೆ, ಜೊತೆಗೆ ಬೇರೆ ಬೇರೆ ಅನಿವಾರ್ಯ ಖರ್ಚುಗಳು ಅದಕ್ಕೆ ಜೊತೆಯಾಗುತ್ತಿದೆ.

ಹೊರ ಹೋಗುವುದು ದೊಡ್ಡ ಪ್ರಮಾಣದ ಹಣ – ಒಳ ಬರುವುದು ಚಿಲ್ಲರೆ ಹಣ ಎಂಬಂತಾಗಿದೆ. ಆದರೆ ಬೃಹತ್ ಉದ್ದಿಮೆಗಳಿಗೆ ಇದು ತದ್ವಿರುದ್ಧವಾಗಿ ಅಪಾರ ಲಾಭವನ್ನು ತಂದುಕೊಡುತ್ತಿದೆ.

ಅಂದರೆ ಖರ್ಚುಗಳನ್ನು ಹೆಚ್ಚು ಮಾಡಿ ಆ ಹಣವನ್ನು ಕೆಲವೇ ವ್ಯಕ್ತಿಗಳು ಮತ್ತು ಕಂಪನಿಗಳು ಕೇಂದ್ರೀಕೃತ ಮಾಡಿಕೊಂಡು ಜನರ ಆರ್ಥಿಕ ಅಸಮಾನತೆಗೆ ಕಾರಣವಾಗಿ, ಅದೇ ಅಂಶಗಳು ಅವರ ಒಟ್ಟು ಜೀವನಮಟ್ಟ ಕುಸಿಯುವಂತೆ ಮಾಡಿವೆ. ಮಾನಸಿಕ ಮತ್ತು ದೈಹಿಕ ಅಸಹಿಷ್ಣತೆ ಉಂಟಾಗಿ ರೋಗಗಳ ಗೂಡಾಗುವಂತೆ ಮಾಡಿದೆ.

ಒಂದು ಅಧ್ಯಯನದ ಪ್ರಕಾರ ಕುಟುಂಬವೊಂದು ಭಾರತದಲ್ಲಿ ಅತಿಹೆಚ್ಚು ಹಣ ಖರ್ಚು ಮಾಡುವುದು ಶಿಕ್ಷಣ ಮತ್ತು ಆರೋಗ್ಯಕ್ಕೆ.

ನೋಡಿ ಇದು ನಮ್ಮ ನೇರ ಅರಿವಿಗೆ ಬಾರದೆ ಪರೋಕ್ಷವಾಗಿ ನಮ್ಮ ಜೇಬುಗಳಿಗೆ ಕತ್ತರಿ ಬೀಳುತ್ತಿದೆ.

ಇತ್ತೀಚಿನ ಹಬ್ಬದ ಸಂದರ್ಭದಲ್ಲಿ ಜನರ ವಿವಿಧ ರೀತಿಯ ಪರದಾಟಗಳನ್ನು ನೋಡಿದಾಗ ಇದೆಲ್ಲಾ ಮನದ ಮೂಲೆಯಲ್ಲಿ ನೆನಪಾಗುತ್ತಿದೆ.

ಅಭಿವೃದ್ಧಿ ಎಂಬುದು ನಮ್ಮ ಬದುಕಿನ ನೆಮ್ಮದಿಯನ್ನು ನಾಶ ಮಾಡುತ್ತಾ, ಮೇಲ್ನೋಟಕ್ಕೆ ನಮ್ಮನ್ನು ವಸ್ತು ಸಂಸ್ಕೃತಿಯ ಶ್ರೀಮಂತರಂತೆ ಬಿಂಬಿಸುತ್ತಾ, ಕೊನೆಗೆ ಜೀವನದ ಬಗ್ಗೆಯೇ ಜಿಗುಪ್ಸೆ ಮೂಡುವಂತೆ ಮಾಡುತ್ತದೆ.

ನಮ್ಮೆಲ್ಲರ ಕ್ರಿಯಾತ್ಮಕ ಚಟುವಟಿಕೆಗಳನ್ನು ನಾಶ ಮಾಡಿ ಪರೋಕ್ಷ ಗುಲಾಮಿ ಸಂಸ್ಕೃತಿಗೆ ದಾಸರನ್ನಾಗಿ ಮಾಡುತ್ತಿದೆ.

ಬಹುತೇಕ ವಿದ್ಯಾವಂತ ಯುವ ಜನಾಂಗ ಸ್ವಿಗ್ಗಿ, ಅಮೆಜಾನ್, ಫ್ಲಿಪ್ ಕಾರ್ಟ್, ಜೊಮಾಟೋ, ಕಾಲ್ ಸೆಂಟರ್ ಮುಂತಾದ ಕಂಪನಿಗಳಲ್ಲಿ ಪೋಸ್ಟ್ ಮ್ಯಾನ್ ಗಳ ರೀತಿಯ ಉದ್ಯೋಗಗಳಲ್ಲಿ ಕೇವಲ ಬದುಕುವ ಏಕೈಕ ಉದ್ದೇಶದಿಂದ ತಮ್ಮ ಅಪೂರ್ವ ಶಕ್ತಿಯನ್ನು ವಿನಿಯೋಗಿಸಿದರೆ ಅವರ ಬದುಕಿನ ಸಾರ್ಥಕತೆ ಮತ್ತು ದೇಶದ ಭವಿಷ್ಯದ ಉತ್ಪಾದನಾ ಸಾಮರ್ಥ್ಯ ಏನಾಗಬಹುದು.

ಆದ್ದರಿಂದ ಕೇವಲ ಹೊಟ್ಟೆಪಾಡಿನ ಉದ್ಯೋಗ ಮಾತ್ರ ಅಭಿವೃದ್ಧಿಯಲ್ಲ. ಮನುಷ್ಯನ ಆಸೆ ಆಕಾಂಕ್ಷೆಗಳು, ಕನಸುಗಳು, ಕ್ರಿಯಾತ್ಮಕ ಸಾಧನೆಗಳು ಮತ್ತು ನೆಮ್ಮದಿಯ ಮಟ್ಟ ಹೆಚ್ಚಿ ತೃಪ್ತಿದಾಯಕ ಬದುಕು ನಮ್ಮದಾಗುವಂತ ಸಮಾಜ ನಮ್ಮದಾಗಲಿ ಎಂದು ಈ ಸಂದರ್ಭದಲ್ಲಿ ಆಶಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ವಿಚಾರ: ಕೊನೆಗೂ ಎಫ್‌ಐಆರ್ ದಾಖಲು

ದೊಡ್ಡಬಳ್ಳಾಪುರ: ಕರ್ತವ್ಯ ನಿರತ ಸಂಚಾರ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪೊಲೀಸ್ ಸಮವಸ್ತ್ರಕ್ಕೆ ಕೈಹಾಕಿ ತಳ್ಳಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…

5 hours ago

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಸಾರ್ವಜನಿಕವಾಗಿ ಹಲ್ಲೆ; ಸಮವಸ್ತ್ರ ಹರಿದು ದರ್ಪ ಮೆರೆದ ವ್ಯಕ್ತಿ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ದೊಡ್ಡಬಳ್ಳಾಪುರ: ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಪೊಲೀಸರ ಮೇಲೆಯೇ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ನಡು ರಸ್ತೆಯಲ್ಲೇ ಸಮವಸ್ತ್ರ ಹರಿದು ದರ್ಪ ಮೆರೆದಿರುವ…

11 hours ago

ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಅಧಿಸೂಚನೆ ಪ್ರಕಟ

ದೊಡ್ಡಬಳ್ಳಾಪುರ: ಮುಂದಿನ ಐದು ವರ್ಷಗಳ ಅವಧಿಗೆ ನಡೆಯಲಿರುವ ತಾಲ್ಲೂಕು ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯ…

17 hours ago

ಬೆ. ಗ್ರಾ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ; ಮಹಿಳೆಯರಿಗೆ ಹೆಚ್ಚಿನ ಆದ್ಯತೆ

ದೊಡ್ಡಬಳ್ಳಾಪುರ: ಮುಂಬರುವ ಐದು ವರ್ಷಗಳ ಅವಧಿಗೆ ನಡೆಯಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 28…

18 hours ago

‘ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಉತ್ತರಿಸಲಿ’- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಉತ್ತರಿಸಲಿ. ಕರ್ನಾಟಕದ ಜನರನ್ನು ದಿಕ್ಕುತಪ್ಪಿಸುವ ರಾಜಕೀಯವನ್ನು ನಿಲ್ಲಿಸಲಿ ಎಂದು…

1 day ago

ರಸಗೊಬ್ಬರ ಮುಂಗಡ ಕಾಯ್ದಿರಿಸಿ ಖರೀದಿಸಲು ಆ್ಯಪ್‌ ಬಿಡುಗಡೆ: ಡಿ.01 ರಿಂದ ಜಾರಿ

ಕೇಂದ್ರ ಸರ್ಕಾರವು ಮೊಬೈಲ್ ಮೂಲಕ ರೈತರು ಎಲ್ಲಾ ರಸಗೊಬ್ಬರಗಳನ್ನು ಮುಂಗಡವಾಗಿ ಕಾಯ್ದಿರಿಸಿ ಖರೀದಿಸುವ ನೂತನ " ಫರ್ಟಿಲೈಸರ್ ಸೇಲ್ ಅಪಿಕೇಶನ್…

1 day ago